SSC: 1,871 ಸಬ್-ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ.. ಡಿಗ್ರಿ ಆಗಿದ್ರೆ ಸಾಕು!
SSC: ಸ್ಟಾಫ್ ಸೆಲೆಕ್ಷನ್ ಕಮಿಷನ್, ದೆಹಲಿ ಪೊಲೀಸ್ & ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿಯಿರುವ ಸಬ್-ಇನ್ಸ್‌ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ದೆಹಲಿ ಪೊಲೀಸ್ & ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಖಾಲಿಯಿರುವ ಸಬ್-ಇನ್ಸ್‌ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಒಟ್ಟು ಹುದ್ದೆ: 1,871 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ 'ಪದವಿ' ಶಿಕ್ಷಣ ಪೂರೈಸಿದರು ಅರ್ಜಿ ಸಲ್ಲಿಕೆ ಮಾಡಬಹುದು.
ವಯೋಮಿತಿ: ಕನಿಷ್ಠ 20 ಮತ್ತು ಗರಿಷ್ಠ 25 ವರ್ಷ (02.08.2001 ಕ್ಕಿಂತ ಮುಂಚಿತವಾಗಿ ಅಥವಾ 01.08.2006ರ ನಂತರ ಜನಿಸಿರಬಾರದು) ನಿಗದಿಪಡಿಸಲಾಗಿದೆ. ನಿಯಮಾನುಸಾರ ಸಡಿಲಿಕೆಯೂ ಇದೆ.
ಅರ್ಜಿ ಶುಲ್ಕ: ರೂ.100 ಇದೆ. ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ: ಆಯ್ಕೆಯಾದವರಿಗೆ ಮಾಸಿಕ ರೂ.35,400 ರಿಂದ ರೂ.1,12,400 ವೇತನ ಕೊಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕಡೆ ದಿನ: ಸೆ.30ಕ್ಕೆ ಕೊನೆಯಾಗುತ್ತದೆ. ಹೆಚ್ಚಿನ ಮಾಹಿತಿಗೆ https://ssc.gov.in/ಗೆ ಸಂಪರ್ಕಿಸಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.