SSC: 2,536 ಹುದ್ದೆಗೆ ಅರ್ಜಿ.. ಪಿಯು ಓದಿರಬೇಕು!

SSC: ಸ್ಟಾಫ್ ಸೆಲೆಕ್ಷನ್ ಕಮಿಷನ್, ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆ-2026ಕ್ಕೆ ಅಧಿಸೂಚನೆ ಹೊರಡಿಸಿದೆ.

Sep 13, 2026 - 17:15
Sep 13, 2026 - 17:16
SSC: 2,536 ಹುದ್ದೆಗೆ ಅರ್ಜಿ.. ಪಿಯು ಓದಿರಬೇಕು!

SSC: ಸ್ಟಾಫ್ ಸೆಲೆಕ್ಷನ್ ಕಮಿಷನ್, ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆ-2026ಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ತುಂಬಲಾಗುತ್ತದೆ. 

ಒಟ್ಟು ಹುದ್ದೆ:  2,536 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 

ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿ/ 12ನೇ ತರಗತಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. 

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿದಾರರು ಆಗಸ್ಟ್ 2, 1999 ಹಾಗೂ ಆಗಸ್ಟ್ 1, 2008ರ ನಡುವೆ ಜನಿಸಿರಬೇಕು. ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗಿದೆ. 

ಅರ್ಜಿ ಶುಲ್ಕ: ರೂ.100 ಇದೆ. ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಟೈಯರ್-1, ಟೈಯರ್ 2 ಮತ್ತು ಕೌಶಲ್ಯ ಪರೀಕ್ಷೆ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ತಿಂಗಳಿಗೆ ರೂ.19,900 ರಿಂದ ರೂ.63,200 ಸಂಬಳವಿದೆ. 

ಅರ್ಜಿ ಸಲ್ಲಿಸಲು ಕಡೆ ದಿನ: ಅಕ್ಟೋಬರ್ 7ಕ್ಕೆ ಕೊನೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ https://ssc.gov.in/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.