SSC: ಮರೆಯಬೇಡಿ.. 2,536 ಹುದ್ದೆ, ನಾಡಿದ್ದು ಕಡೆ ದಿನ
SSC: ಸ್ಟಾಫ್ ಸೆಲೆಕ್ಷನ್ ಕಮಿಷನ್, ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆ-2026ಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಡಿದ್ದು ಅಂದರೆ ಅ.7 ಕಡೆ ದಿನವಾಗಿದೆ.
SSC: ಸ್ಟಾಫ್ ಸೆಲೆಕ್ಷನ್ ಕಮಿಷನ್, ಕಂಬೈನ್ಡ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆ-2026ಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ತುಂಬಲಾಗುತ್ತದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಡಿದ್ದು ಅಂದರೆ ಅ.7 ಕಡೆ ದಿನವಾಗಿದೆ.
ಒಟ್ಟು ಹುದ್ದೆ: 2,536 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ವಿದ್ಯಾರ್ಹತೆ: ಪಿಯುಸಿ/ 12ನೇ ತರಗತಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು.
ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ರೂ.100 ಇದೆ. ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.19,900 ರಿಂದ ರೂ.63,200 ಸಂಬಳವಿದೆ.
ಹೆಚ್ಚಿನ ಮಾಹಿತಿಗೆ https://ssc.gov.in/ಗೆ ಸಂಪರ್ಕಿಸಬಹುದು.