ಸಂತ ಫಿಲೋಮಿನಾ ಕಾಲೇಜಿನಲ್ಲಿ 5 ದಿನಗಳ ಉದ್ಯೋಗ ಸಿದ್ಧತಾ ತರಬೇತಿ

St Philomena College: ಸಂತ ಫಿಲೋಮಿನಾ ಕಾಲೇಜಿನಲ್ಲಿ 5 ದಿನಗಳ ಉದ್ಯೋಗ ಸಿದ್ಧತಾ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Nov 24, 2026 - 16:36
Nov 24, 2026 - 16:49
ಸಂತ ಫಿಲೋಮಿನಾ ಕಾಲೇಜಿನಲ್ಲಿ 5 ದಿನಗಳ ಉದ್ಯೋಗ ಸಿದ್ಧತಾ ತರಬೇತಿ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ 5 ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ನ.16 ರಿಂದ 20 ರವರೆಗೆ ಏರ್ಪಡಿಸಲಾಗಿತ್ತು.

ಕಾಲೇಜಿನ ನಿರಂತರ ಉದ್ಯೋಗ ಸಿದ್ಧತಾ ಉಪಕ್ರಮದ ಭಾಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿ ನೀಡಲಾಯಿತು.

ತರಬೇತುದಾರರಾದ ದೀಪಕ್ ಬಡಿಗೇರ್ ಮತ್ತು ಆಯೆಶತ್ ಹಫೀಝಾ ಅವರು, ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಅಧಿವೇಶನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಐಬಿಎಂ 'ಐಬಿಎಂ ಸ್ಕಿಲ್ಸ್‌ಬಿಲ್ಡ್‌' (IBM SkillsBuild) ಡಿಜಿಟಲ್ ಕಲಿಕಾ ವೇದಿಕೆಯ ಪರಿಚಯ ಮಾಡಿಕೊಡಲಾಯಿತು. ನಿಗದಿತ ಕಲಿಕಾ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 'ಐಬಿಎಂ ಸ್ಕಿಲ್ಸ್‌ಬಿಲ್ಡ್‌' ವತಿಯಿಂದ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ಕ್ಯಾಂಪಸ್ ಹಾಗೂ ಆಫ್-ಕ್ಯಾಂಪಸ್ ಉದ್ಯೋಗ ನೇಮಕಾತಿಗೆ ಅವರನ್ನು ಸಿದ್ಧಗೊಳಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿತ್ತು ಎಂದು ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೆರೋ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.