ಸಂತ ಫಿಲೋಮಿನಾ ಕಾಲೇಜು: ಶೈಕ್ಷಣಿಕ ವಿಭಾಗದ ಉಪಕುಲಸಚಿವ 'ವಿಪಿನ್ ನಾಯ್ಕ್'ಗೆ ಪಿಹೆಚ್‌ಡಿ ಪದವಿ

St Philomena College: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಎನ್.ಎಸ್.ವಿಪಿನ್ ನಾಯ್ಕ್ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್‌ಡಿ) ಪದವಿ ಪಡೆದಿದ್ದಾರೆ.

Nov 16, 2026 - 15:18
ಸಂತ ಫಿಲೋಮಿನಾ ಕಾಲೇಜು: ಶೈಕ್ಷಣಿಕ ವಿಭಾಗದ ಉಪಕುಲಸಚಿವ 'ವಿಪಿನ್ ನಾಯ್ಕ್'ಗೆ ಪಿಹೆಚ್‌ಡಿ ಪದವಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕ ಎನ್.ಎಸ್.ವಿಪಿನ್ ನಾಯ್ಕ್ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್‌ಡಿ)  ಪದವಿ ಪಡೆದಿದ್ದಾರೆ. 

'ಸ್ಟಡಿ ಆಫ್ ಹೆವಿ ಮೆಸಾನ್ ಸ್ಪೆಕ್ಟ್ರಮ್ ಅಂಡ್ ಡೀಕೇಸ್ ಇನ್ ದಿ ಫ್ರೇಮ್ವರ್ಕ್ ಆಫ್ ಕ್ವಾರ್ಕ್ ಮೋಡೆಲ್ಸ್' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಈ ಪದವಿ ಲಭಿಸಿದೆ.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ಆಂಟನಿ ಪ್ರಕಾಶ್ ಮೊಂತೇರೊ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಬಿ.ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

ನೆಟ್ ಹಾಗೂ ಕೆಸೆಟ್ ಪರೀಕ್ಷೆಯಲ್ಲಿಯೂ ಅರ್ಹತೆ ಪಡೆದಿದ್ದಾರೆ. ಅಂತರರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ 6 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ 25ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. 

ಬೆಳ್ತಂಗಡಿ ತಾಲೂಕಿನ ನಾಳದ ಸತೀಶ್ ನಾಯ್ಕ್ ಮತ್ತು ಉಷಾ ದಂಪತಿಯ ಪುತ್ರರಾಗಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.