St Philomena College: ಸಂತ ಫಿಲೋಮಿನಾ ಕಾಲೇಜಿನಲ್ಲಿ ಗ್ರಾಹಕ ವೇದಿಕೆ ಚಟುವಟಿಕೆಗಳಿಗೆ ಚಾಲನೆ
St Philomena College: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಗ್ರಾಹಕ ವೇದಿಕೆ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ 2026–27ನೇ ಸಾಲಿನ ಗ್ರಾಹಕ ವೇದಿಕೆ (Consumer Forum) ಚಟುವಟಿಕೆಗಳಿಗೆ ಈಚೆಗೆ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳಲ್ಲಿ ಗ್ರಾಹಕರ ಹಕ್ಕುಗಳು, ಜವಾಬ್ದಾರಿಗಳು ಮತ್ತು ಗ್ರಾಹಕ ದೂರುಗಳ ಪರಿಹಾರಕ್ಕೆ ಲಭ್ಯವಿರುವ ವ್ಯವಸ್ಥೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಮಂಗಳೂರಿನ ಗ್ರಾಹಕ ಮಾಹಿತಿ ಕೇಂದ್ರದ ಉಪಾಧ್ಯಕ್ಷ ಎಡ್ವಿನ್ ನಜಾರಿಯಸ್ ಡಿಮೆಲ್ಲೋ ಹಾಗೂ ಗೌರವ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯದರ್ಶಿ ಡಿ.ಆರ್.ಸುನಂದಾ ಭಾಗವಹಿಸಿದ್ದರು.
ಮಂಗಳೂರಿನ ಗ್ರಾಹಕ ಮಾಹಿತಿ ಕೇಂದ್ರದ ಕಾರ್ಯವೈಖರಿ ಮತ್ತು ಗ್ರಾಹಕರಿಗೆ ಅದು ಒದಗಿಸುವ ನೆರವಿನ ಕುರಿತು ಎಡ್ವಿನ್ ನಜಾರಿಯಸ್ ಡಿಮೆಲ್ಲೋ ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರುವುದರೊಂದಿಗೆ, ಜವಾಬ್ದಾರಿಯುತ ಮತ್ತು ಜಾಗೃತ ಗ್ರಾಹಕರಾಗಿ ರೂಪುಗೊಳ್ಳಬೇಕು ಎಂದು ತಿಳಿ ಹೇಳಿದರು.
ದೈನಂದಿನ ಬದುಕಿನಲ್ಲಿ ಗ್ರಾಹಕರ ಸಮಸ್ಯೆಗಳು ಹಾಗೂ ದೂರುಗಳನ್ನು ಪರಿಹರಿಸುವಲ್ಲಿ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರಗಳ ಕಾರ್ಯವೈಖರಿ ಬಗ್ಗೆ ಡಿ.ಆರ್.ಸುನಂದಾ ತಿಳಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೆರೊ, ಗ್ರಾಹಕ ವೇದಿಕೆಯ ಉಪಕ್ರಮವನ್ನು ಶ್ಲಾಘಿಸಿದರು. ವೇದಿಕೆಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು, ಸಕ್ರಿಯವಾಗಿ ಪಾಲ್ಗೊಂಡು ಅದರ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದು ಹೇಳಿದರು.
2026–27ನೇ ಸಾಲಿನಲ್ಲಿ ಗ್ರಾಹಕ ವೇದಿಕೆ ಏರ್ಪಡಿಸಿದ್ದ ವಿವಿಧ ಚಟುವಟಿಕೆಗಳ ಕಾರ್ಯಯೋಜನೆಯನ್ನು ಕಿರುಚಿತ್ರ ಪ್ರದರ್ಶನದ ಮೂಲಕ ಅನಾವರಣಗೊಳಿಸಲಾಯಿತು.
ಶಿಲ್ಪಾ ಇ ಸ್ವಾಗತಿಸಿದರು. ವಿಸ್ಮಿತ್ ವಂದಿಸಿದರು. ಗ್ರಾಹಕ ವೇದಿಕೆಯ ಸಂಯೋಜಕಿ ಸ್ವಾತಿ ಶೆಟ್ಟಿ ಡಿ ಮತ್ತು ಕಿಶೋರ್ ಕುಮಾರ್ ರೈ ಕಾರ್ಯಕ್ರಮವನ್ನು ಸಂಯೋಜಿಸಿದರು. ಅಪೂರ್ವಾ ಕಾರ್ಯಕ್ರಮವನ್ನು ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.