ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಗ್ರಂಥಾಲಯ & ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಹಯೋಗದಲ್ಲಿ 'ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2026' ಆಚರಣೆಯ ಭಾಗವಾಗಿ ಇಂಗ್ಲಿಷ್ ಭಾಷಣ ಸ್ಪರ್ಧೆಯನ್ನು ಈಚೆಗೆ ಏರ್ಪಡಿಸಲಾಗಿತ್ತು.
ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ 'ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್' ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿ, 'ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆ'ಯನ್ನು ಎತ್ತಿ ತೋರಿಸಿದರು.
'ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರೊಂದಿಗೆ, ಇತರರ ಜೊತೆಗೂ ಸಹಾನುಭೂತಿ ಹೊಂದಬೇಕು. ಸವಾಲುಗಳನ್ನು ಎದುರಿಸಿ, ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಬೆಳಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
'ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು, ವಿದ್ಯಾರ್ಥಿಗಳಿಗೆ ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು ನೇರವಾಗುತ್ತವೆ' ಎಂದು ತಿಳಿಸಿದರು.
ಈ ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲ ಡಾ.ಎ.ಪಿ.ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಈಶ್ವರ ಗೌಡ ತೀರ್ಪುಗಾರರಾಗಿ ಭಾಗವಹಿಸಿದ್ದರು
.
ಸ್ಪರ್ಧೆಯ ಫಲಿತಾಂಶ:
ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂಸಿಎ ವಿದ್ಯಾರ್ಥಿನಿ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿಕಾಂನ ಅಪೂರ್ವ ಡಿ ದ್ವಿತೀಯ ಸ್ಥಾನ ಮತ್ತು ದ್ವಿತೀಯ ಬಿಸಿಎ ತರಗತಿಯ ಪ್ರತ್ಯಕ್ಷ ಪಿ.ಎ ತೃತೀಯ ಸ್ಥಾನವನ್ನು ಪಡೆದರು.
ಜೆನಿಶಾ ಕುಟಿನ್ಹಾ (ದ್ವಿತೀಯ ಬಿಎಸ್ಸಿ) ಹಾಗೂ ಕೃಷ್ಣ ವಂಶಿ (ದ್ವಿತೀಯ ಬಿಬಿಎ) ಸಮಾಧಾನಕರ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು.
ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರೆಹಮಾನ್ ಜಿ ವಂದಿಸಿದರು. ಸನ್ನಿಧಿ (ಪ್ರಥಮ ಬಿಬಿಎ) ಮತ್ತು ಮಾನಸ (ತೃತೀಯ ಬಿಎಸ್ಸಿ) ಪ್ರಾರ್ಥಿಸಿದರು.
ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್.ಜಿ ಹಾಗೂ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ ಸಹಕರಿಸಿದರು.