ಸಂತ ಫಿಲೋಮಿನಾ ಕಾಲೇಜು: ಗಾಂಧಿ ಸ್ಮೃತಿ ಕಾರ್ಯಕ್ರಮ

St Philomena College: ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Oct 5, 2026 - 16:34
ಸಂತ ಫಿಲೋಮಿನಾ ಕಾಲೇಜು: ಗಾಂಧಿ ಸ್ಮೃತಿ ಕಾರ್ಯಕ್ರಮ

ಪುತ್ತೂರು: ಗಾಂಧೀಜಿಯವರ ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗುತ್ತವೆ. ಅವರ ಬೋಧನೆಗಳನ್ನು ಅರ್ಥೈಸಿಕೊಂಡಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ ಡಾ.ವಿಜಯಕುಮಾರ್ ಎಂ ಹೇಳಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯಕ್ಷಕಲಾ ಕೇಂದ್ರ ಮತ್ತು ವಿದ್ಯಾರ್ಥಿ ಸಂಘಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಗಾಂಧಿ ಸ್ಮೃತಿ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷ ತೆ ವಹಿಸಿ ಮಾತನಾಡಿದರು. 


 
ಈ ವೇಳೆ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. 

ರಾಷ್ಟ್ರೀಯ ಸೇವಾ ಯೋಜನೆ, ಯಕ್ಷಕಲಾ ಕೇಂದ್ರ, ವಿದ್ಯಾರ್ಥಿ ಸಂಘದ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.


 ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಕೆ.ಚಂದ್ರಶೇಖರ್ ಸ್ವಾಗತಿಸಿದರು. ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.