ಸಂತ ಫಿಲೋಮಿನಾ ಕಾಲೇಜು: ಸಮಾಜಕಾರ್ಯ ಕ್ಷೇತ್ರಗಳ ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮ
St Philomena College: ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳಿಗಾಗಿ 'ಸಮಾಜ ಕಾರ್ಯದ ಕ್ಷೇತ್ರಗಳು' ಎಂಬ ವಿಚಾರ ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮವು ಈಚೆಗೆ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ, ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳಿಗಾಗಿ 'ಸಮಾಜ ಕಾರ್ಯದ ಕ್ಷೇತ್ರಗಳು' ಎಂಬ ವಿಚಾರ ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮವು ಈಚೆಗೆ ನಡೆಯಿತು.
ಚೈಲ್ಡ್ ಪ್ರೊಟೆಕ್ಷನ್ ಆ್ಯಂಡ್ ಡೆವಲಪ್ಮೆಂಟ್ ಪ್ರೊಫೆಷನಲ್ & ಚೈಲ್ಡ್ ಫಂಡ್ ಇಂಡಿಯಾದ ಫೀಲ್ಡ್ ಆಫೀಸರ್ ಸಿದ್ಧಾಂತ್ ಪಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದರು.
ಮಕ್ಕಳ ಹಕ್ಕುಗಳು, ನೀತಿ ಪ್ರತಿಪಾದನೆ, ಮಾನವ ಕಳ್ಳಸಾಗಣೆ ತಡೆ, ಆನ್‌ಲೈನ್ ಸುರಕ್ಷತೆ ಮತ್ತು ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ತಮ್ಮ ವೃತ್ತಿಪರ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಚೈಲ್ಡ್ ಫಂಡ್ ಇಂಡಿಯಾದಲ್ಲಿನ ತಮ್ಮ ಅನುಭವ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದಲ್ಲಿ ನಡೆದ ಒಸೀಕ್ (OSEAC) ಯೋಜನೆಯ ಅನುಭವಗಳನ್ನು ಆಧರಿಸಿ, ಮಕ್ಕಳ ರಕ್ಷಣಾ ವ್ಯವಸ್ಥೆ, ಆನ್‌ಲೈನ್ ಸುರಕ್ಷತೆ ಮತ್ತು ವಿವಿಧ ಪಾಲುದಾರ ಸಂಸ್ಥೆಗಳ ನಡುವಿನ ಸಹಯೋಗದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯದ ವಿವಿಧ ಕ್ಷೇತ್ರಗಳು ಮತ್ತು ಮಕ್ಕಳ ರಕ್ಷಣಾ ಕಾರ್ಯವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದ ಅವರು, ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವಲ್ಲಿ ಸಾಮೂಹಿಕ ಕಾರ್ಯಾಚರಣೆ ಹಾಗೂ ವಿವಿಧ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯವನ್ನು ಒತ್ತಿಹೇಳಿದರು.
ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವುದು. ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸುವುದು ಹಾಗೂ ಶೋಷಣೆ ತಡೆಗಟ್ಟುವಲ್ಲಿ ಸಮಾಜ ಕಾರ್ಯಕರ್ತರ ಪಾತ್ರವನ್ನು ವಿವರಿಸಿದರು. ತಮ್ಮ ವೃತ್ತಿಜೀವನದ ಅನುಭವಗಳಲ್ಲಿನ ನೈಜ ಉದಾಹರಣೆಗಳನ್ನೂ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯದ ವಿವಿಧ ಕ್ಷೇತ್ರಗಳು ಹಾಗೂ ಮಕ್ಕಳ ರಕ್ಷಣಾ ಕಾರ್ಯವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದ ಅವರು, ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವಲ್ಲಿ ಸಾಮೂಹಿಕ ಕಾರ್ಯಾಚರಣೆ ಹಾಗೂ ವಿವಿಧ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯವನ್ನು ತಿಳಿಸಿದರು.
ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವುದು, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸುವುದು ಹಾಗೂ ಶೋಷಣೆಯನ್ನು ತಡೆಗಟ್ಟುವಲ್ಲಿ ಸಮಾಜ ಕಾರ್ಯಕರ್ತರ ಪಾತ್ರವನ್ನು ವಿವರಿಸಿದರು. ತಮ್ಮ ವೃತ್ತಿಜೀವನದ ಅನುಭವಗಳಲ್ಲಿನ ನೈಜ ಉದಾಹರಣೆಗಳನ್ನು ಹಂಚಿಕೊಂಡರು.
ಮಕ್ಕಳು ಘನತೆ ಮತ್ತು ಸುರಕ್ಷತೆಯೊಂದಿಗೆ ಬೆಳೆಯಲು ಹಾಗೂ ತಮ್ಮ ಸಾಮರ್ಥ್ಯವನ್ನು ವಿಕಸನಗೊಳಿಸಿಕೊಳ್ಳಲು ಅನುಕೂಲಕರ ವಾತಾವರಣವನ್ನು ನಿರ್ಮಿಸುವುದೇ ಮಕ್ಕಳ ರಕ್ಷಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಎಂಎಸ್‌ಡಬ್ಲ್ಯೂ ವಿಭಾಗದ ಸಂಯೋಜಕಿ ಶ್ರೀಮಣಿ ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪ್ರತಿಭಾ ವಂದಿಸಿದರು. ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.