ಸಂತ ಫಿಲೋಮಿನಾ ಕಾಲೇಜು: ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆ

St Philomena College: ಸಂತ ಫಿಲೋಮಿನಾ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ, ಭೌತಶಾಸ್ತ್ರ ವಿಭಾಗ ಹಾಗೂ ಎನ್ಎಸ್ಎಸ್ ಸಹಯೋಗದಲ್ಲಿ 'ರಾಷ್ಟ್ರೀಯ ಬಾಹ್ಯಾಕಾಶ ದಿನ'ವನ್ನು ಈಚೆಗೆ ಆಯೋಜಿಸಲಾಗಿತ್ತು.

Aug 18, 2026 - 13:30
ಸಂತ ಫಿಲೋಮಿನಾ ಕಾಲೇಜು: ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ, ಭೌತಶಾಸ್ತ್ರ ವಿಭಾಗ ಹಾಗೂ ಎನ್ಎಸ್ಎಸ್  ಸಹಯೋಗದಲ್ಲಿ  'ರಾಷ್ಟ್ರೀಯ ಬಾಹ್ಯಾಕಾಶ ದಿನ'ವನ್ನು ಈಚೆಗೆ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ & ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಎ.ಪಿ.ರಾಧಾಕೃಷ್ಣ ಮಾತನಾಡಿ, 'ನಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಿಷಯದ ಬಗ್ಗೆಯೂ ಕುತೂಹಲ ಬೆಳೆಸಿಕೊಳ್ಳಬೇಕು. ಇದು ಜೀವನದಲ್ಲಿ ಶಾಂತ, ವಿನಮ್ರ ಮತ್ತು ಏಕಾಗ್ರರನ್ನಾಗಿ ಮಾಡುತ್ತದೆ. ವಿದ್ಯಾರ್ಥಿಗಳು ಭೌತಶಾಸ್ತ್ರದ ಕುರಿತು ಆಸಕ್ತಿ ಬೆಳಸಿಕೊಂಡು, ಬಾಹ್ಯಾಕಾಶ ವಿಜ್ಞಾನ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡುವಂತೆ' ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ ಮಾತನಾಡಿದರು. ಪ್ರಾಚೀನ ಕಾಲದಿಂದ ಇಂದಿನವರೆಗೆ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಪ್ರಗತಿ ಹಾಗೂ ಸಾಧನೆಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳೊಂದಿಗೆ, ಕಾಲೇಜಿನ ವಿವಿಧ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು. ಜೊತೆಗೆ ಈ ಕಾರ್ಯಕ್ರಮ ಆಯೋಜಿಸಿದ್ದ ಸಿಬ್ಬಂದಿಯನ್ನು ಅಭಿನಂದಿಸಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ, ಎನ್ಎಸ್ಎಸ್ ಅಧಿಕಾರಿ ಡಾ.ಕೆ.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜ್ಞಾನ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮಾನಸಾ ಹಾಗೂ ತಂಡದಿಂದ ಪ್ರಾರ್ಥಿಸಿದರು. ರಾಧಿಕಾ ವೈ ಸ್ವಾಗತಿಸಿದರು. ಸ್ಪೂರ್ತಿ ಸಿ.ಎಸ್ ವಂದನಾರ್ಪಣೆ ಸಲ್ಲಿಸಿದರು. ವಿಂಧ್ಯಶ್ರೀ ರೈ ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.