ಸಂತ ಫಿಲೋಮಿನಾ ಕಾಲೇಜು: ಎನ್‌ಎಸ್‌ಎಸ್ ದಿನಾಚರಣೆ & ವಾರ್ಷಿಕ ಫಿಲೋ ಸೇವಾಮೃತ–2026 ಆಯೋಜನೆ

St Philomena College: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆ & ವಾರ್ಷಿಕ ಫಿಲೋ ಸೇವಾಮೃತ–2026 ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Sep 26, 2026 - 14:07
ಸಂತ ಫಿಲೋಮಿನಾ ಕಾಲೇಜು: ಎನ್‌ಎಸ್‌ಎಸ್ ದಿನಾಚರಣೆ & ವಾರ್ಷಿಕ ಫಿಲೋ ಸೇವಾಮೃತ–2026 ಆಯೋಜನೆ

ಪುತ್ತೂರು: ಎನ್‌ಎಸ್‌ಎಸ್ ಕಾರ್ಯಕರ್ತರು ಸದಾ ಸತ್ಯದ ದೃಷ್ಟಿಕೋನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಯೋಜನಾ ಸಂಯೋಜಕ ಡಾ.ಶೇಷಪ್ಪ ಕೆ ಹೇಳಿದರು. 

ಇಲ್ಲಿನ  ಸಂತ ಫಿಲೋಮಿನಾ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಏರ್ಪಡಿಸಿದ್ದ ಎನ್‌ಎಸ್‌ಎಸ್ ದಿನಾಚರಣೆ & ವಾರ್ಷಿಕ 'ಫಿಲೋ ಸೇವಾಮೃತ–2026' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  

'ಎನ್‌ಎಸ್‌ಎಸ್' ಎಂದರೆ ನಾನಲ್ಲ, ನೀನು ಎಂಬ ಸೇವಾ ಮನೋಭಾವ. ಸಣ್ಣ-ಸಣ್ಣ ಸೇವಾ ಕಾರ್ಯಗಳ ಮೂಲಕ ಉತ್ತಮ ಸಮುದಾಯವನ್ನು ನಿರ್ಮಿಸಬೇಕು. ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮನಸ್ಸಿನಲ್ಲಿ ಇಚ್ಛಾಶಕ್ತಿ ಇರಬೇಕು. ಗ್ರಾಮೀಣ ಸಂಸ್ಕೃತಿಗೆ ಮಹತ್ವ ನೀಡುವುದರೊಂದಿಗೆ, ಯಾವುದೇ ಕಾರ್ಯವನ್ನು ಸಂಪೂರ್ಣ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲ ಡಾ.ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ. ಮಾನವಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದರು.

ಈ ಸಮಾರಂಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಡಾ.ಕೆ.ಚಂದ್ರಶೇಖರ್ ಅವರನ್ನು ಶಾಲು ಹೊದಿಸಿ,  ಸನ್ಮಾನಿಸಲಾಯಿತು. ಇತರೆ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಎನ್‌ಎಸ್‌ಎಸ್ ಅಧಿಕಾರಿ ಡಾ.ಕೆ.ಚಂದ್ರಶೇಖರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್‌ಎಸ್‌ಎಸ್ ಘಟಕದ ನಾಯಕ ಬೃಂದಾನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಅಪರ್ಣಾ ಮತ್ತು ತಂಡದವರು ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಪುಷ್ಪಾ ಎನ್ ಸ್ವಾಗತಿಸಿದರು. ಎನ್‌ಎಸ್‌ಎಸ್ ನಾಯಕ ಸಾಯಿ ಪ್ರತೀಶ್ ವಂದಿಸಿದರು.

ಎನ್‌ಎಸ್‌ಎಸ್ ಕಾರ್ಯದರ್ಶಿ ಕಾರ್ತಿಕ್ ಪಿ.ಸಿ, ಎನ್‌ಎಸ್‌ಎಸ್ ಘಟಕದ ನಾಯಕಿ ಸ್ಪಂದನ ಹಾಗೂ ಶಿಲ್ಪಾ ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.