ಸಂತ ಫಿಲೋಮಿನಾ ಕಾಲೇಜು: ಸೈನ್ಸ್ ಫೋರಂ 2026–27ರ ಉದ್ಘಾಟನಾ ಸಮಾರಂಭ

Puttur: ಸಂತ ಫಿಲೋಮಿನಾ ಕಾಲೇಜಿನಲ್ಲಿ 'ಸೈನ್ಸ್ ಫೋರಂ' ಉದ್ಘಾಟನಾ ಸಮಾರಂಭ ನಡೆಯಿತು.

Aug 30, 2026 - 12:42
ಸಂತ ಫಿಲೋಮಿನಾ ಕಾಲೇಜು: ಸೈನ್ಸ್ ಫೋರಂ 2026–27ರ ಉದ್ಘಾಟನಾ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಭೌತಿಕವಾದಿ ಮನೋಭಾವದಿಂದ ಹೊರಬಂದು, ವಿಜ್ಞಾನದ ಬಗ್ಗೆ ಆಸಕ್ತಿ, ಶಿಸ್ತು ಹಾಗೂ ದೃಢಸಂಕಲ್ಪವನ್ನು ಬೆಳೆಸಿಕೊಳ್ಳಬೇಕು ಎಂದು ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ವಂ.ಡಾ.ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು.

ಈಚೆಗೆ ಕಾಲೇಜಿನಲ್ಲಿ ನಡೆದ 2026–27ನೇ ಸಾಲಿನ 'ಸೈನ್ಸ್ ಫೋರಂ' ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಇಂದಿನ ವೈಜ್ಞಾನಿಕ ಪ್ರಗತಿಯ ಹಿಂದೆ, ವಿಜ್ಞಾನಿಗಳ ಪರಿಶ್ರಮ ಮತ್ತು ತ್ಯಾಗವಿದೆ. ಇದರಿಂದ ವಿದ್ಯಾರ್ಥಿಗಳು ಪ್ರೇರಣೆಯನ್ನು ಪಡೆದು ಇತರರಿಗೂ ಮಾದರಿಯಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಟಿ.ಎನ್.ಕೇಶವ ಮಾತನಾಡಿ, ವಿಜ್ಞಾನದ ಬಗ್ಗೆ ನಿರಂತರ ಆಸಕ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಅವಲೋಕನ, ಪ್ರಯೋಗ ಹಾಗೂ ಅನ್ವೇಷಣೆಯ ಮೂಲಕ ವಿಜ್ಞಾನವನ್ನು ಕಲಿಯುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಸ್ನೇಹಾ ವಾಗ್ಳೆ ನಿರೂಪಿಸಿದರು. ಮಾನಸಾ ಹಾಗೂ ತಂಡ ಪ್ರಾರ್ಥಿಸಿದರು. ವಿಜ್ಞಾನ ವೇದಿಕೆ ಅಧ್ಯಕ್ಷ  ಮನೀಶ್ ಸ್ವಾಗತಿಸಿದರು. ವಿಜ್ಞಾನ ವೇದಿಕೆಯ ಸಂಚಾಲಕ ಡಾ.ಎಡ್ವಿನ್ ಡಿಸೋಜಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ದಿಲ್ಶಾನಾ ವಂದಿಸಿದರು. ಈ ಕಾರ್ಯಕ್ರಮವನ್ನು ಡಾ.ಎಡ್ವಿನ್ ಡಿಸೋಜಾ ಹಾಗೂ ಶ್ರೇರಕ್ಷಾ ಬಿ.ವಿ.ಸಂಯೋಜಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.