ಸಂತ ಫಿಲೋಮಿನಾ ಕಾಲೇಜು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ

St Philomena College: ಸಂತ ಫಿಲೋಮಿನಾ ಕಾಲೇಜಿನಲ್ಲಿ 'ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ'ವನ್ನು ಏರ್ಪಡಿಸಲಾಗಿತ್ತು.

Sep 24, 2026 - 17:38
ಸಂತ ಫಿಲೋಮಿನಾ ಕಾಲೇಜು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು, ಪುತ್ತೂರು ಚುನಾವಣಾ ಸಾಕ್ಷರತಾ ಸಂಘ ಮತ್ತು ಗ್ರಾಹಕ ವೇದಿಕೆಯ ಸಹಯೋಗದಲ್ಲಿ, 'ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ'ವನ್ನು ಏರ್ಪಡಿಸಲಾಗಿತ್ತು.

ಕಾಲೇಜಿನ ಉಪಪ್ರಾಂಶುಪಾಲ ಡಾ.ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣೆಯ ಮಹತ್ವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಚುನಾವಣಾ ಆಯೋಗದ ವಿಧಾನಸಭಾ ಕ್ಷೇತ್ರ ಮಟ್ಟದ ತರಬೇತುದಾರ, ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಹರಿಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮತದಾನದ ಹಕ್ಕನ್ನು ಚಲಾಯಿಸಲು ಅಗತ್ಯವಿರುವ ಅರ್ಹತೆಗಳು ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಬೇಕಿರುವ ದಾಖಲೆಗಳ ಕುರಿತು ವಿವರಿಸಿದರು.

ಪುತ್ತೂರು ಸಹಾಯಕ ತಹಶೀಲ್ದಾರ್ ಸುಲೋಚನ ಅವರು, ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿಗಾಗಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕ ಧನ್ಯಾ ಪಿ.ಟಿ. ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ, ಕಾಲೇಜಿನ ಗ್ರಾಹಕ ವೇದಿಕೆಯ ಸಂಯೋಜಕಿ ಸ್ವಾತಿ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.