ಸಂತ ಫಿಲೋಮಿನಾ ಕಾಲೇಜು: ವಾಣಿಜ್ಯ ಸಂಘದ ಚಟುವಟಿಕೆಗಳಿಗೆ ಚಾಲನೆ

St Philomena's College: ಸಂತ ಫಿಲೋಮಿನಾ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ವಾಣಿಜ್ಯ ಸಂಘದ 2026–27ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಿ, 'ವಿಶ್ವ ಉದ್ಯಮಿಗಳ ದಿನ'ವನ್ನು ಆಚರಿಸಲಾಯಿತು.

Aug 28, 2026 - 06:52
ಸಂತ ಫಿಲೋಮಿನಾ ಕಾಲೇಜು: ವಾಣಿಜ್ಯ ಸಂಘದ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ವಾಣಿಜ್ಯ ಸಂಘದ 2026–27ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಿ,  'ವಿಶ್ವ ಉದ್ಯಮಿಗಳ ದಿನ'ವನ್ನು ಆಚರಿಸಲಾಯಿತು.

'ತರಗತಿಯಾಚೆ: ನವೀನತೆ ಮತ್ತು ಉದ್ಯಮಶೀಲತೆಯತ್ತ ಮಾರ್ಗನಕ್ಷೆ' ಎಂಬ ಆಶಯದಡಿ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟನಿ ಪ್ರಕಾಶ್ ಮೊಂತೆರೊ ಅಧ್ಯಕ್ಷತೆ ವಹಿಸಿದ್ದರು. 

ಮಂಗಳೂರಿನ ನಿಸರ್ಗ ಆ್ಯಡ್ಸ್ & ಇವೆಂಟ್ಸ್ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಡಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. 

ಈ ವೇಳೆ ಅವರು ಮಾತನಾಡಿ, 'ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವೀನತೆ & ಉದ್ಯಮಶೀಲತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉದ್ಯೋಗ ಆಯ್ಕೆಗಳಿಗಷ್ಟೇ ಸೀಮಿತವಾಗಬಾರದು. ಹೊಸ ಅವಕಾಶಗಳನ್ನು ಗುರುತಿಸಿ, ಸೃಜನಶೀಲ ಆಲೋಚನೆಗಳನ್ನು ಬೆಳೆಸಿಕೊಂಡು, ಅವುಗಳನ್ನು ಯಶಸ್ವಿ ಉದ್ಯಮಗಳಾಗಿ ರೂಪಾಂತರಿಸಬೇಕು' ಎಂದರು.

ಉದ್ಯಮಶೀಲತೆಯ ಬೆಳವಣಿಗೆಯಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ನಾಯಕತ್ವ ಗುಣ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ವಾಣಿಜ್ಯ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.