ರಾಜ್ಯ ಮಟ್ಟದ ಚೆಸ್ ಸ್ಪರ್ಧೆ: ಇಂದ್ರಪ್ರಸ್ಥ ವಿದ್ಯಾರ್ಥಿನಿ ಕ್ಷೇತ್ರ ಮಟ್ಟಕ್ಕೆ ಆಯ್ಕೆ
Indraprastha: ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ 'ಇಂದ್ರಪ್ರಸ್ಥ ವಿದ್ಯಾಲಯದ' ವಿದ್ಯಾರ್ಥಿಗಳು ಪ್ರಶಸ್ತಿ ಜಯಿಸಿದ್ದಾರೆ.
ಉಪ್ಪಿನಂಗಡಿ: ವಿದ್ಯಾಭಾರತಿ ಕರ್ನಾಟಕ ವತಿಯಿಂದ, ಹಾಸನದ 'ಬೂದೇಶ್ವರ ಸ್ವಾಮಿ ವಿದ್ಯಾಸಂಸ್ಥೆ'ಯಲ್ಲಿ ಜರುಗಿನಿಂದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ 'ಇಂದ್ರಪ್ರಸ್ಥ ವಿದ್ಯಾಲಯದ' ವಿದ್ಯಾರ್ಥಿಗಳು ಪ್ರಶಸ್ತಿ ಜಯಿಸಿದ್ದಾರೆ.
17 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವೃದ್ಧಿ ರೈ ಪ್ರಥಮ ಸ್ಥಾನ ಪಡೆದಿದ್ದು, ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ 9ನೇ ತರಗತಿ ದಕ್ಷ್ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾಸಂಸ್ಥೆಯ ಸಂಚಾಲಕ, ಆಡಳಿತ ಮಂಡಳಿಯ ಅಧ್ಯಕ್ಷ, ಮುಖ್ಯ ಶಿಕ್ಷಕ ಮತ್ತು ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.