ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Vivekananda PU College: ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

Sep 23, 2026 - 15:33
ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಾಮರಾಜನಗರದ ಜನ ಸೇವ ವಿದ್ಯಾಕೇಂದ್ರದಲ್ಲಿ ಈಚೆಗೆ ಜರುಗಿದ ವಿದ್ಯಾಭಾರತಿ ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.  

ಈ ತಂಡವನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಮೋಕ್ಷಿತ್ ಕೆ, ಲಿಖಿತ್, ಪ್ರಜ್ವಲ್, ಚಂದನ್, ಶಶಾಂಕ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಾನ್ವಿತ್, ಸಾತ್ವಿಕ್, ಕೀರ್ತನ್, ಲಿಖಿತ್, ಘನಶ್ಯಾಮ್, ದೇಶ್ಚಿತ್ ಹಾಗೂ ತರುಣ್ ಕುಮಾರ್ ಬಿ.ಆರ್ ಪ್ರತಿನಿಧಿಸಿದ್ದರು. 

ಇವರುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಅವರು ತರಬೇತಿ ನೀಡಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.