ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ: ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಆಯ್ಕೆ
Patte Sri Krishna Educational Institutions: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪುತ್ತೂರು (ಪಟ್ಟೆ ಬಡಗನ್ನೂರು): ರಾಜ್ಯ ಮಟ್ಟದ 14 ವರ್ಷ ವಯೋಮಾನ 'ವಿದ್ಯಾಭಾರತಿ ವಾಲಿಬಾಲ್ ಟೂರ್ನಿ' ಬೀದರ್‌ನಲ್ಲಿ ನಡೆಯಲಿದೆ.
ಈ ಪಂದ್ಯಾವಳಿಗೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಕೆ.ಎ.ಆದಿ ಹಾಗೂ ಸೃಜನ್ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಾನದವರ ಟೂರ್ನಿಯಲ್ಲಿ 10ನೇ ತರಗತಿಯ ಸಾಥ್ವಿ ಪಾಲ್ಗೊಳ್ಳುತ್ತಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.