India Book of Records: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸುಳ್ಯದ ಇಶಾನ್

India Book of Records: ಸುಳ್ಯ ತಾಲೂಕಿನ ಪ್ರತಿಭಾವಂತ ಬಾಲಕ ಬಿ.ಎ.ಇಶಾನ್ ಹೆಸರು 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌'ಗೆ ಸೇರ್ಪಡೆಗೊಂಡಿದೆ.

Aug 14, 2026 - 13:21
India Book of Records: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸುಳ್ಯದ ಇಶಾನ್

ಸುಳ್ಯ: ತಾಲೂಕಿನ ಪ್ರತಿಭಾವಂತ ಬಾಲಕ ಬಿ.ಎ.ಇಶಾನ್ ಹೆಸರು 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌'ಗೆ ಸೇರ್ಪಡೆಗೊಂಡಿದೆ. ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ಕೇವಲ ಬಲಗೈಯನ್ನು ಬಳಸಿ, ಎಲೆಕ್ಟ್ರಾನಿಕ್ ಕೀಬೋರ್ಡ್ ನುಡಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. 

13 ವರ್ಷ 5 ತಿಂಗಳ ವಯಸ್ಸಿನ ಇಶಾನ್, 4 ನಿಮಿಷ 17 ಸೆಕೆಂಡುಗಳಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದನ್ನು ಜುಲೈ 13 ರಂದು 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ಅಧಿಕೃತವಾಗಿ ದೃಢಪಡಿಸಿದೆ. ಅವರಿಗೆ ‘ಐಬಿಆರ್ ಅಚೀವರ್’ ಪ್ರಶಸ್ತಿಯನ್ನು ಸಂಸ್ಥೆಯ ವತಿಯಿಂದ ನೀಡಲಾಗಿದೆ.

ಸದ್ಯ, ಮಂಗಳೂರಿನ ಶಾರದ ವಿದ್ಯಾಲಯದಲ್ಲಿ 8ನೇ ತರಗತಿ ಓದುತ್ತಿರುವ ಇಶಾನ್, ಚಿಕ್ಕ ವಯಸ್ಸಿನಿಂದಲೇ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಡಾ. ದಿನೇಶ್ ರಾವ್ ಅವರಿಂದ ಕೀಬೋರ್ಡ್ ವಾದನದ ತರಬೇತಿ ಹಾಗೂ, ಆಚಾರ್ಯ ಮಂಜುನಾಥ್ ಪೂಜಾರ್ ಗುರೂಜಿ ಅವರಿಂದ ಗಾಂಧಾರ ವಿದ್ಯೆಯ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಇಶಾನ್ ಅವರು ಕೆವಿಜಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಪ್ರಾಧ್ಯಾಪಕರಾದ ಬಿ.ಟಿ.ಅಜಿತ್ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಕೆ.ಎಸ್.ಸುಪ್ರಿತಾ ದಂಪತಿಗಳ ಪುತ್ರರಾಗಿದ್ದಾರೆ.

ತಮ್ಮ ಮಗನ ಸಾಧನೆಯ ಬಗ್ಗೆ ಮಾತನಾಡಿದ ಪೋಷಕರು, 'ಆತನ ಪರಿಶ್ರಮ ಮತ್ತು ಗುರುಗಳ ಮಾರ್ಗದರ್ಶನದಿಂದ ಈ ದಾಖಲೆ ಸಾಧ್ಯವಾಯಿತು. ಮುಂದೆಯೂ ಸಂಗೀತ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕೆಂಬುದು ನಮ್ಮ ಆಶಯ' ಹೇಳಿದ್ದಾರೆ.

ಬಾಲಕನ ಈ ಅಪೂರ್ವ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು, ಸ್ನೇಹಿತರು ಮತ್ತು ಸಂಗೀತಾಸಕ್ತರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ. ಶಾರದ ವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗವು ಮೆಚ್ಚುಗೆ ವ್ಯಕ್ತಪಡಿಸಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.