ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Sulya: ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ.
ಸುಳ್ಯ: ಇಲ್ಲಿನ ಶಾಸಕಿ ಭಾಗೀರಥಿ ಮುರುಳ್ಯ (Bhagirathi Murulya) ಪ್ರಯಾಣಿಸುತ್ತಿದ್ದ ಟೊಯೊಟಾ ಇನ್ನೋವಾ ಕಾರು, ಇಂದು ಕರಿಕಳ-ನಿಂತಿಕಲ್ಲು ನಡುವಿನ ಮುಚ್ಚಿಲ ಸಮೀಪ ಅಪಘಾತಕ್ಕೀಡಾಗಿದೆ.
ಶಾಸಕಿ ತೆರಳುತ್ತಿದ್ದ ಇನ್ನೋವಾ ಕಾರು, ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಸದ್ಯ ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ, ನಜ್ಜುಗುಜ್ಜಾಗಿದೆ. ಶಾಸಕಿ ಭಾಗೀರಥಿ ಮುರುಳ್ಯ ಅವರು, ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.