ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಮತ್ತೆ ಜೈಲೇ ಗತಿ: ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದು

Supreme Court Cancels Bail Of Ex Karnataka Minister Vinay Kulkarni: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದುಪಡಿಸಿದೆ.

Nov 25, 2026 - 11:32
Nov 25, 2026 - 11:48
ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಮತ್ತೆ ಜೈಲೇ ಗತಿ: ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದು
https://www.barandbench.com/

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದುಪಡಿಸಿದೆ. 

ಅವರು, ಮತ್ತೆ ಎರಡು ವಾರದೊಳಗೆ ಕೋರ್ಟ್‌ ಮುಂದೆ ಶರಣಾಗುವಂತೆ ನ್ಯಾ.ಪ್ರಶಾಂತ್‌ ಕುಮಾರ್‌ ಮಿಶ್ರಾ ನೇತೃತ್ವದ ಪೀಠವು ಮಹತ್ವದ ಆದೇಶ ನೀಡಿದೆ. 

ಜತೆಗೆ ಶಾಸಕ ಸ್ಥಾನದಿಂದಲೂ ವಿನಯ್‌ ಕುಲಕರ್ಣಿ ಅವರು ಅನರ್ಹಗೊಳ್ಳಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಗೊಳಿಸಿತ್ತು.

2016ರ ಜೂ.15 ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್​ನಲ್ಲಿ ಯೋಗೇಶ್‌ ಗೌಡ ಹತ್ಯೆಯಾಗಿತ್ತು. ಈ ಸಂಬಂಧ  ನವೆಂಬರ್ 2020ರಲ್ಲಿ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿತ್ತು. ಈ ಕೊಲೆ ರಾಜಕೀಯ ಪ್ರೇರಿತವಾಗಿದೆ ಆರೋಪಿಸಲಾಗಿತ್ತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.