T20 Women Asia Cup: ಭಾರತಕ್ಕೆ ಟ್ರೋಫಿ.. ಶ್ರೀಲಂಕಾಕ್ಕೆ ಸೋಲು
T20 Women Asia Cup: ದುಬೈನಲ್ಲಿ ಭಾನುವಾರ ನಡೆದ 'ಮಹಿಳಾ ಟಿ20 ಏಷ್ಯಾ ಕಪ್-2026' ಟೂರ್ನಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತವು ಜಯಿಸಿದೆ.
T20 Women Asia Cup: ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 'ಮಹಿಳಾ ಟಿ20 ಏಷ್ಯಾ ಕಪ್-2026' ಟೂರ್ನಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತವು ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ.
ಭಾರತವು ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (68 ರನ್) & ಸ್ಮೃತಿ ಮಂದಾನ (59 ರನ್) ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ನಿಗದಿತ 20 ಓವರ್‌ಗಳಲ್ಲಿ ವನಿತೆಯರು, 183/5 ರನ್‌ಗಳನ್ನು ಪೇರಿಸಿದರು.
ಈ ಗುರಿ ಬೆನ್ನಟ್ಟಿದ ಶ್ರೀಲಂಕಾ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿತು. 20 ಓವರ್‌ಗಳಲ್ಲಿ ಬರೀ 111 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಒಪ್ಪಿಸಿತು. ಶ್ರೀಲಂಕಾ ಪರ ನಾಯಕಿ ಚಾಮರಿ ಅಟಪಟ್ಟು ದಿಟ್ಟ ಹೋರಾಟ ತೋರಿದರು. ಆದರೂ 36 ರನ್‌ಗಳಿಗೆ ಔಟ್ ಆದರು.
ಭಾರತದ ಸ್ಟಾರ್ ಬೌಲರ್ ಶ್ರೀಚರಣಿ, ಕೇವಲ 20 ರನ್‌ಗಳನ್ನು ಬಿಟ್ಟುಕೊಟ್ಟು 4 ವಿಕೆಟ್ ಕಬಳಿಸಿದರು. ಅನುಭವಿ ಸ್ಪಿನ್ನರ್ ದೀಪ್ತಿ ಶರ್ಮಾ 3 ವಿಕೆಟ್ ಪಡೆದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.