ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Taluk-level Kabaddi Tournament: ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

Oct 8, 2026 - 15:20
ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಕೊಂಬೆಟ್ಟು ಕ್ರೀಡಾಂಗಣದಲ್ಲಿ ಕಬಕ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ, ಈಚೆಗೆ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆಯಿತು. ಇಲ್ಲಿ ವಿವೇಕಾನಂದ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದಿದ್ದು, ಬಾಲಕರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡಿದೆ. 

ಬಾಲಕಿಯರ ತಂಡದ ಪರವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ವಿನ್ಯಾ ರೈ, ಸೃಷ್ಟಿ ಎಸ್.ಆರ್ ರೈ, ವೀಕ್ಷಾ ಬಿ ಆರ್, ಧರಣಿ ಕೆ.ಟಿ, ಶ್ರಾವ್ಯ, ಕೆ.ಸುಶಾನಿ, ಸಿ.ಎಸ್.ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್ ಹಾಗೂ ತನ್ವಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಧನ್ವಿ ಎ.ಆರ್ ಪಾಲ್ಗೊಂಡಿದ್ದರು. 

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಕಿಶನ್ ಕೆ.ವೈ, ತ್ರಿಶಿಕ್ ಕೆ ಗೌಡ, ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್.ಪಿ, ನಿದೀಶ್ ಶೆಟ್ಟಿ, ಮನ್ವಂತ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ.ಆರ್ ದಿಶಾಂತ್ ಸ್ಥಾನ ಪಡೆದಿದ್ದರು. 

ಈ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ತರಬೇತಿಯನ್ನು ನೀಡಿದ್ದಾರೆ. ಇವರುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.