ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Taluk-level Table Tennis Tournament: ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಹಾಗೆಯೇ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Oct 7, 2026 - 14:54
Oct 7, 2026 - 14:55
ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ, ಮುಕ್ರಂಪಾಡಿ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದೊಂದಿಗೆ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಈಚೆಗೆ ನಡೆಯಿತು. 

ಇಲ್ಲಿ ವಿವೇಕಾನಂದ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಹಾಗೆಯೇ  ಬಾಲಕರ ತಂಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಬಾಲಕಿಯರ ತಂಡದ ಪರವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಆತ್ಮಿಕಾ ಹೆಚ್, ಮನ್ಮಿತಾ ಹಾಗೂ ಶರಣ್ಯಾ ಹೆಚ್.ಎನ್ ಭಾಗವಹಿಸಿದ್ದರು.

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ನಿಖಿಲ್ ಕುಮಾರ್ ಕೆ.ವಿ, ನಿಹಾಲ್ ರೈ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಭಿಲಾಷ್ ಮತ್ತು ವಿಕ್ರಮ್ ಎ.ಜಿ ಸ್ಥಾನ ಪಡೆದಿದ್ದರು. 

ಈ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರು ತರಬೇತಿಯನ್ನು ನೀಡಿದ್ದಾರೆ. ಇವರುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.