ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Taluk Level Throwball Tournament: ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ, ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Nov 21, 2026 - 16:40
Nov 21, 2026 - 16:41
ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ, ಪುತ್ತೂರು ತಾಲೂಕು ಮಟ್ಟದ 17 ಮತ್ತು 14 ವರ್ಷದೊಳಗಿನ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯು ಈಚೆಗೆ ರಾಮಕುಂಜದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಈ ಪಂದ್ಯಾವಳಿಯ 17 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ, ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಅದೇ ರೀತಿಯಲ್ಲಿ 17 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕಿಯರ ತಂಡದ ಎಂ.ಎಸ್.ಅನುಶ್ರೀ, ಎಂ.ಧನ್ವಿ ಶೆಟ್ಟಿ ಮತ್ತು ತ್ರಿಶಾ.ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಶಿಶಿರ್ ಜೆ ಸಾಲ್ಯಾನ್ 'ಬೆಸ್ಟ್ ಥ್ರೋವರ್' ಪ್ರಶಸ್ತಿ ಪಡೆದರೆ, ಅಯತುಲ್ಲಾ ಸಲೀಂ 'ಆಲ್‌ರೌಂಡರ್' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಎಂ.ಎಸ್.ಅನುಶ್ರೀ 'ಬೆಸ್ಟ್ ಥ್ರೋವರ್ ಪ್ರಶಸ್ತಿ' ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಹಾಗೂ ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.