ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Indraprastha Vidyalaya: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Sep 14, 2026 - 20:42
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ, ಪುತ್ತೂರಿನ ಬೆಥನಿ ಪ್ರೌಢಶಾಲೆಯಲ್ಲಿ ಈಚೆಗೆ ತಾಲೂಕು ಮಟ್ಟದ 14 ಹಾಗೂ 17 ವರ್ಷ ವಯೋಮಾನದ ಬಾಲಕ - ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ನಡೆಯಿತು. 

ಈ ಪಂದ್ಯಾವಳಿಯ 17 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ  ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . 

10ನೇ ತರಗತಿ ವಿದ್ಯಾರ್ಥಿಗಳಾದ ಆಯತುಲ್ಲಾ ಸಲೀಂ ಬೆಸ್ಟ್ ಅಟ್ಯಾಕರ್ ಮತ್ತು ಪ್ರೀತಮ್  ಉತ್ತಮ ಪಾಸರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. 
     
ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವಸದಸ್ಯರು, ಸಂಚಾಲಕರು,  ಶಾಲಾ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಹಾಗೂ ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.