ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಪ್ರಶಸ್ತಿ

Taluk Level Volleyball Tournament: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

Oct 1, 2026 - 17:16
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಪ್ರಶಸ್ತಿ

ಪುತ್ತೂರು: ಸುದಾನ ಪದವಿ-ಪೂರ್ವ ಕಾಲೇಜಿನ ಸಹಯೋಗದಲ್ಲಿ ಈಚೆಗೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಇಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ. 

ಈ ತಂಡದ ಪರವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪ್ರೀತಂ ಸಿ.ಆರ್, ಚೇತನ್.ಎಂ.ಎಂ, ನಿರೀಕ್ಷಿತ್, ಪ್ರೀತಂ, ಜಯಂತ್ ಕೆ.ಎಸ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಕಾರ್ತಿಕ್ ಕೆಮ್ಮಿಂಜೆ, ಸಾತ್ವಿಕ್, ಅಮೃತ್ ಬಿ.ಕೆ, ವರ್ಷಿತ್.ಬಿ.ಎಂ, ಭವಿಶ್ ಡಿ ಗೌಡ, ಪೃಥ್ವಿರಾಜ್ ಕೆ.ಆರ್, ಆತ್ಮಿಕ್ ಎ.ಎಸ್ ಪಾಲ್ಗೊಂಡಿದ್ದರು.
 
ದ್ವಿತೀಯ ವಿಜ್ಞಾನ ವಿಭಾಗದ ಅಮೃತ್ ಬಿ.ಕೆ 'ಬೆಸ್ಟ್ ಅಟ್ಯಾಕರ್' ಪ್ರಶಸ್ತಿಗೆ ಭಾಜನರಾದರು.

ಇವರುಗಳಿಗೆ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ತರಬೇತಿಯನ್ನು ನೀಡಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.