Tata: ಟಾಟಾ ಕಾರುಗಳಿಗೆ ಮುಗಿಬಿದ್ದ ಜನ.. ಫುಲ್ ಡಿಮ್ಯಾಂಡ್!

Tata: ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ (ಟಿಎಂಪಿವಿ), ಇಂದು (ಶನಿವಾರ) 2026ರ ಜುಲೈ ತಿಂಗಳ ಒಟ್ಟು ಮಾರಾಟದ ಅಂಕಿ-ಅಂಶದ ವರದಿಯನ್ನು ಪ್ರಕಟಿಸಿದೆ.

Aug 1, 2026 - 16:44
Tata: ಟಾಟಾ ಕಾರುಗಳಿಗೆ ಮುಗಿಬಿದ್ದ ಜನ.. ಫುಲ್ ಡಿಮ್ಯಾಂಡ್!

ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ (ಟಿಎಂಪಿವಿ) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ಇಂದು (ಶನಿವಾರ) 2026ರ ಜುಲೈ ತಿಂಗಳ ಒಟ್ಟು ಮಾರಾಟದ ಅಂಕಿ-ಅಂಶದ ವರದಿಯನ್ನು ಪ್ರಕಟಿಸಿದ್ದು, 63,760 ಯುನಿಟ್ ಕಾರುಗಳನ್ನು ಗ್ರಾಹಕರಿಗೆ ವಿತರಿಸಿದೆ.  2025ರ ಇದೇ ಅವಧಿಯಲ್ಲಿ 40,175 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಮೂಲಕ ವರ್ಷದಿಂದ ವರ್ಷಕ್ಕೆ ಶೇಕಡ 59% ಪ್ರಗತಿ ಸಾಧಿಸಿದೆ. 

ಸದ್ಯ 'ಟಾಟಾ' ಪ್ಯಾಸೆಂಜರ್ ವೆಹಿಕಲ್ಸ್ ವಿಭಾಗದಲ್ಲಿ ಟಿಯಾಗೊ, ಟಿಗೂರ್, ಅಲ್ಟೋಜ್, ಪಂಚ್, ನೆಕ್ಸಾನ್‌, ಕರ್ವ್, ಹ್ಯಾರಿಯರ್, ಸಫಾರಿ ಹಾಗೂ ಸಿಯೆರಾ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. 

ಈಚೆಗೆ ಟಾಟಾ ಪಂಚ್ ಇವಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು:

ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ 'ಟಾಟಾ ಪಂಚ್ ಇವಿ'ಯನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ಇದು ವಯಸ್ಕ ಪ್ರಯಾಣಿಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.09 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. 

ಈ  ಎಲೆಕ್ಟ್ರಿಕ್ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ, 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
 
ನೂತನ 'ಟಾಟಾ ಪಂಚ್ ಇವಿ' ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು  40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಿಂಗಲ್ ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 

ಜೂನ್ ತಿಂಗಳಲ್ಲಿ ಟಾಟಾ ಸಿಯೆರಾ ಇವಿ ಮಾರಾಟಕ್ಕೆ ಬಂದಿತ್ತು:

ಇದು ರೂ.18.79 ಲಕ್ಷದಿಂದ ರೂ.25.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.  63 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 565 ರಿಂದ 665 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.  

ಈ ಕಾರು ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ & 12-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಆಲ್-ವೀಲ್ ಡಿಸ್ಕ್‌ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.