Tata: ಸದ್ದಿಲ್ಲದೇ ಟಾಟಾ ಕಾರುಗಳ ಬೆಲೆ ಏರಿಕೆ

Tata Cars Price Hike: ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿಮಿಟೆಡ್, ಹೊಸ ವಾಹನ ಖರೀದಿಸುವವರಿಗೆ ಶಾಕ್ ನೀಡಿದೆ.

Aug 21, 2026 - 14:27
Tata: ಸದ್ದಿಲ್ಲದೇ ಟಾಟಾ ಕಾರುಗಳ ಬೆಲೆ ಏರಿಕೆ

ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿಮಿಟೆಡ್ (Tata Motors Passenger Vehicles Ltd), ಹೊಸ ವಾಹನ ಖರೀದಿಸುವವರಿಗೆ ಶಾಕ್ ನೀಡಿದೆ. 

ಸೆ.1 ರಿಂದ ಜಾರಿಗೆ ಬರುವಂತೆ, ತನ್ನೆಲ್ಲ ಕಾರು ಹಾಗೂ ಎಸ್‌ಯುವಿಗಳ ಬೆಲೆಯನ್ನು ಹೆಚ್ಚಿಸಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.25,000 ವರೆಗೆ ದರವನ್ನು ಏರಿಕೆ ಮಾಡಲಾಗಿದೆ. ಈ ಬಗ್ಗೆ ಕಂಪನಿಯು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.  

ಇನ್‌ಪುಟ್ ಹಾಗೂ ತಯಾರಿಕಾ ವೆಚ್ಚಗಳು ಅಧಿಕಗೊಂಡಿದ್ದು, ಹೀಗಾಗಿ, ಬೆಲೆಯನ್ನು ಪರಿಷ್ಕರಿಸಲಾಗಿದೆ ಎಂದು ಕಂಪನಿಯು ತಿಳಿಸಿದೆ. 

ಜೂನ್ 30 ರಂದು ಮಾರಾಟಕ್ಕೆ ಬಂದ ಟಾಟಾ ಸಿಯೆರಾ ಇವಿ (Tata Sierra EV) ವಿಶೇಷತೆಗಳೇನು:

ಇದು ರೂ.18.79 ಲಕ್ಷದಿಂದ ರೂ.25.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ನೈನಿತಾಲ್ ನಾಕ್ಟರ್ನ್, ರಿಷಿಕೇಶ್ ರಾಪಿಡ್ಸ್, ಬೆಂಗಾಲ್ ರೂಜ್, ಅಂಡಮಾನ್ ಅಡ್ವೆಂಚರ್, ಪ್ರೈಸ್ಟೈನ್ ವೈಟ್, ಕೂರ್ಗ್ ಕ್ಲೌಡ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಎಲೆಕ್ಟ್ರಿಕ್ ಎಸ್‌ಯುವಿ 63 & 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 565 ರಿಂದ 665 ಕಿ.ಮೀ ರೇಂಜ್ ಕೊಡುತ್ತದೆ. 

ಹೊಸ 'ಟಾಟಾ ಸಿಯೆರಾ ಇವಿ' 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಮತ್ತು 12-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.