Tata: ಟಾಟಾ ಕಾರುಗಳಿಗೆ ಮನಸೋತ ಜನ.. ಫುಲ್ ಡಿಮ್ಯಾಂಡ್!

Tata Motors: ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ ಟಾಟಾ ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿವೆ.

Oct 4, 2026 - 19:03
Tata: ಟಾಟಾ ಕಾರುಗಳಿಗೆ ಮನಸೋತ ಜನ.. ಫುಲ್ ಡಿಮ್ಯಾಂಡ್!

Tata Motors: ಟಾಟಾ ಮೋಟಾರ್ಸ್ ನಂಬಿಕಾರ್ಹ ವಾಹನ ತಯಾರಕ ಕಂಪನಿಯಾಗಿದೆ. ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸಿದೆ. ಒಟ್ಟು 56,972 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 59,667 ಯುನಿಟ್‌ಗಳನ್ನು ಮಾರಲಾಗಿತ್ತು. ಆದಾಗ್ಯೂ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ -4.52% ಇಳಿಕೆಯಾಗಿದೆ. 

ಈಚೆಗೆ ಬಿಡುಗಡೆಯಾದ 'ಟಾಟಾ ಏರಿಸ್' ವಿಶೇಷತೆಗಳೇನು:

ಇದು ರೂ.5.29 ಲಕ್ಷದಿಂದ ರೂ.8.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್, ಪ್ಯೂರ್ ಪ್ಲಸ್, ಕ್ರಿಯೇಟಿವ್ ಮತ್ತು ಅಕಾಂಪ್ಲಿಶ್ಡ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. 

ನೂತನ 'ಏರಿಸ್' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಫಾಗ್ ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ದಂಡೇಲಿ ಡ್ರಿಝಲ್ (ಪರ್ಪಲ್), ಡೇಟೋನಾ ಗ್ರೇ, ನೈಟ್ರೋ ಕ್ರಿಮ್ಸನ್ (ರೆಡ್), ಡ್ಯೂನ್ ಗ್ಲೋ (ಗೋಲ್ಡ್),  ಪ್ಯೂರ್ ಗ್ರೇ ಮತ್ತು ಪ್ರಿಸ್ಟೈನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಸೆಡಾನ್ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 419 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದ್ದು, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯೂನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 

ಹೊಸ 'ಏರಿಸ್' 10.25-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಸೌಂಡ್ ಸಿಸ್ಟಮ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.