Tata: ಟಾಟಾದ ತಾಕತ್ತು.. ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!

Tata Punch EV: ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ 'ಟಾಟಾ ಪಂಚ್ ಇವಿ'ಯನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

Jul 31, 2026 - 15:38
Tata: ಟಾಟಾದ ತಾಕತ್ತು.. ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!

ಟಾಟಾ ಪಂಚ್ ಇವಿ (Tata Punch EV) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) ಈ ಕಾರನ್ನು ಅತ್ಯಂತ ಸುರಕ್ಷಿತ ಎಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.
 
ಇದು ವಯಸ್ಕ ಪ್ರಯಾಣಿಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.09 ಅಂಕಗಳು ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ನೂತನ 'ಟಾಟಾ ಪಂಚ್ ಇವಿ' ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಈ ಕಾರು ರೂ.9.69 ಲಕ್ಷದಿಂದ ರೂ.12.59 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಡಿಯೂ ಗ್ರಾಹಕರ ಖರೀದಿಗೆ ಲಭ್ಯವಿದ್ದು, ರೂ.6.49 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಪ್ರತಿ ಕಿ.ಮೀಗೆ ರೂ.2.60 ಶುಲ್ಕ ಪಾವತಿಸಬೇಕು. ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ & ಎಂಪವರ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಕೂಡ ಸಿಗುತ್ತದೆ. 

ಇದು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ವೈ' ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್‌ ವೀಲ್‌ಗಳನ್ನು ಹೊಂದಿದೆ. ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಸೂಪರ್‌ನೋವಾ ಕಾಪರ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 

ಹೊಸ 'ಪಂಚ್ ಇವಿ' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 14 ಲೀಟರ್‌ ಸಾಮರ್ಥ್ಯದ ಫ್ರಂಟ್ ಟ್ರಂಕ್ & 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ  40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಪ್ಯಾಡಲ್ ಶಿಫ್ಟರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್‌ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.