Tata: ಟಾಟಾದ ಈ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?

Tata Punch EV: 'ಟಾಟಾ ಪಂಚ್ ಇವಿ' ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಸದ್ಯ ಈ ಕಾರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ.

Sep 12, 2026 - 13:36
Tata: ಟಾಟಾದ ಈ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?

Tata Punch EV: 'ಟಾಟಾ ಪಂಚ್ ಇವಿ' ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಸದ್ಯ ಈ ಕಾರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.10,000 ರಿಂದ ರೂ.20,000 ವರೆಗೆ ಹೆಚ್ಚಿಸಲಾಗಿದೆ. ರೂ.9.79 ಲಕ್ಷದಿಂದ ರೂ.12.99 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್‌ ವೀಲ್‌ಗಳನ್ನು ಹೊಂದಿದೆ.  ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಸೂಪರ್‌ನೋವಾ ಕಾಪರ್ & ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 

ಈ ಕಾರು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 30 ಮತ್ತು 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಿಂಗಲ್-ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

ನೂತನ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.2-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್‌ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರ ರಕ್ಷಣೆಗೂ ಹೆಸರುವಾಸಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.