TATA: ಗಟ್ಟಿಮುಟ್ಟಾದ ಟಾಟಾ ಕಾರಿದು.. ಮನಸೋತ ಜನ.. 7-ಸೀಟರ್

Tata Safari: ಈ 2026ರ ಜುಲೈನಲ್ಲಿ 'ಟಾಟಾ ಸಫಾರಿ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Aug 13, 2026 - 13:47
TATA: ಗಟ್ಟಿಮುಟ್ಟಾದ ಟಾಟಾ ಕಾರಿದು.. ಮನಸೋತ ಜನ.. 7-ಸೀಟರ್

ಟಾಟಾ ಸಫಾರಿ (Tata Safari) ನಂಬಿಕಾರ್ಹ ಎಸ್‌ಯುವಿಯಾಗಿದೆ. ಈ 2026ರ ಜುಲೈನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,453 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,242 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 17% ಬೆಳವಣಿಗೆಯಾಗಿದೆ.

'ಟಾಟಾ ಸಫಾರಿ' ವಿಶೇಷತೆಗಳೇನು:

ಈ ಕಾರು ರೂ.13.40 ಲಕ್ಷದಿಂದ ರೂ.26.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್ ಎಕ್ಸ್ ಹಾಗೂ ಅಕಂಪ್ಲಿಶ್ಡ್ ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು & 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ಸೂಪರ್ನೋವಾ ಕಾಪರ್, ಫ್ರಾಸ್ಟ್ ವೈಟ್, ರಾಯಲ್ ಬ್ಲೂ, ಪ್ಯೂರ್ ಗ್ರೇ ಹಾಗೂ ಕಾರ್ಬನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 

ನೂತನ 'ಸಫಾರಿ' 6/ 7 ಆಸನಗಳನ್ನು ಹೊಂದಿದೆ. ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 420 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 2.0-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14 ರಿಂದ 16.9 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್, ಡ್ಯುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 10-ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 

ಸುರಕ್ಷತೆಗೂ ಹೆಸರುವಾಸಿಯಾಗಿದೆ. ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್​​ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.