Tata Safari: ಟಾಟಾ ಸಫಾರಿ ಕಾರಿಗೆ ಮನಸೋತ ಜನ.. ವಿಶೇಷತೆಗಳೇನು?

Tata Safari: ಟಾಟಾ ಸಫಾರಿ ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ 2026ರ ಜೂನ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Jul 18, 2026 - 15:33
Tata Safari: ಟಾಟಾ ಸಫಾರಿ ಕಾರಿಗೆ ಮನಸೋತ ಜನ.. ವಿಶೇಷತೆಗಳೇನು?

ಬೆಂಗಳೂರು: ಟಾಟಾ ಸಫಾರಿ (Tata Safari) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜೂನ್ ತಿಂಗಳಲ್ಲಿ ಒಟ್ಟು 1271 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 922 ಯುನಿ‍‍ಟ್‍‍ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 37.85% ಪ್ರಗತಿಯಾಗಿದೆ.

ನೂತನ 'ಸಫಾರಿ' ರೂ.13.29 ಲಕ್ಷದಿಂದ ರೂ.26.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಮಾರ್ಟ್, ಪ್ಯೂರ್ ಎಕ್ಸ್, ಅಡ್ವೆಂಚರ್ ಎಕ್ಸ್ ಪ್ಲಸ್ ಮತ್ತು ಅಕಂಪ್ಲಿಶ್ಡ್ ಎಕ್ಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಸೂಪರ್ನೋವಾ ಕಾಪರ್, ರಾಯಲ್ ಬ್ಲೂ, ಪ್ಯೂರ್ ಗ್ರೇ ಹಾಗೂ ಕಾರ್ಬನ್ ಬ್ಲ್ಯಾಕ್ ಬಣ್ಣಗಳೊಂದಿಗೂ ಲಭ್ಯವಿದೆ.

ಇದು 6 & 7 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ 'ಟಾಟಾ ಸಫಾರಿ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ  2.0-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14 ರಿಂದ 16.9 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 

ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು 10-ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ  360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.