Tata Sierra EV: ಇದೇ ಟಾಟಾದ ಪವರ್.. ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್

Tata Sierra EV: ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 'ಟಾಟಾ ಸಿಯೆರಾ ಇವಿ' ಎಲೆಕ್ಟ್ರಿಕ್ ಎಸ್‌ಯುವಿ, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

Nov 20, 2026 - 12:27
Nov 20, 2026 - 12:28
Tata Sierra EV: ಇದೇ ಟಾಟಾದ ಪವರ್.. ಈ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್

Tata Sierra EV: 'ಟಾಟಾ ಸಿಯೆರಾ ಇವಿ' ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) ಈ ಕಾರನ್ನು ಅತ್ಯಂತ ಸುರಕ್ಷಿತ ಎಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

 'ಟಾಟಾ ಸಿಯೆರಾ ಇವಿ'ಯನ್ನು ಭಾರತ್ ಎನ್‌ಸಿಎಪಿಯ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದ್ದು, ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.62 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. 

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್-ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್‌ಬ್ರೇಕ್‌ಗಳು ಹಾಗೂ  360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

'ಸಿಯೆರಾ ಇವಿ' ವಿಶೇಷತೆಗಳು: 

ನೂತನ 'ಸಿಯೆರಾ' ಎಲೆಕ್ಟ್ರಿಕ್ ಎಸ್‌ಯುವಿ, ರೂ.18.79 ಲಕ್ಷದಿಂದ ರೂ.26.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪ್ಯೂರ್, ಪ್ಯೂರ್ ಎಸ್, ಅಡ್ವೆಂಚರ್, ಎಂಪವರ್ಡ್ ಹಾಗೂ ಎಂಪವರ್ಡ್ ಎ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಈ ಕಾರು ಹೆಚ್ಚು ಅತ್ಯಾಕರ್ಷಕವಾಗಿದೆ.  ನೈನಿತಾಲ್ ನಾಕ್ಟರ್ನ್, ರಿಷಿಕೇಶ್ ರಾಪಿಡ್ಸ್, ಬೆಂಗಾಲ್ ರೂಜ್, ಅಂಡಮಾನ್ ಅಡ್ವೆಂಚರ್, ಪ್ರೈಸ್ಟೈನ್ ವೈಟ್, ಕೂರ್ಗ್ ಕ್ಲೌಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5-ಆಸನಗಳನ್ನು ಪಡೆದಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದ್ದು, 63 ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 565 ರಿಂದ 665 ಕಿ.ಮೀ ರೇಂಜ್ ಕೊಡುತ್ತದೆ.

ಹೊಸ 'ಸಿಯೆರಾ ಇವಿ' ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 12-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.