ಶಿಕ್ಷಕರ ದಿನಾಚರಣೆ ಸಿದ್ಧತೆ: ಪೂರ್ವಭಾವಿ ಸಭೆ

Teachers Day: ಸೆ.5 ರಂದು ಆಯೋಜಿಸಲಾಗಿರುವ 'ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ' ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

Aug 28, 2026 - 17:29
ಶಿಕ್ಷಕರ ದಿನಾಚರಣೆ ಸಿದ್ಧತೆ: ಪೂರ್ವಭಾವಿ ಸಭೆ

ಬೆಂಗಳೂರು: ಸೆ.5 ರಂದು ಆಯೋಜಿಸಲಾಗಿರುವ 'ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ' ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಿದರು.

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ರೂಪುರೇಷೆ, ವಿವಿಧ ಕಾರ್ಯಕ್ರಮಗಳ ಆಯೋಜನೆ, ಶಿಕ್ಷಕರಿಗೆ ಗೌರವ ಸಲ್ಲಿಸುವ ವಿಧಾನ ಒಳಗೊಂಡಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎನ್.ಗಣೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.