IND vs NL: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

IND vs NL: ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ, ನ್ಯೂಜಿಲೆಂಡ್ ವಿರುದ್ಧ ಭಾರತವು 244 ರನ್‌ಗಳ ಬೃಹತ್ ಅಂತರದಿಂದ ಹೀನಾಯವಾಗಿ ಸೋತಿದೆ.

Nov 13, 2026 - 18:18
Nov 13, 2026 - 18:26
IND vs NL: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

IND vs NL: ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಏಕದಿನ (ODI) ಪಂದ್ಯದಲ್ಲಿ,  ನ್ಯೂಜಿಲೆಂಡ್ ವಿರುದ್ಧ ಭಾರತವು 244 ರನ್‌ಗಳ ಬೃಹತ್ ಅಂತರದಿಂದ ಹೀನಾಯವಾಗಿ ಸೋತಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಪರವಾಗಿ, ಆರಂಭಿಕ ಆಟಗಾರ ವಿಲ್ ಯಂಗ್ ಅಬ್ಬರಿಸಿದರು. ಭರ್ಜರಿ ಶತಕ (125 ರನ್) ಸಿಡಿಸಿದರು. ಟಿಮ್ ಸೀಫರ್ಟ್ (58 ರನ್) ಮತ್ತು ಫಿನ್ ಅಲೆನ್ (41 ರನ್) ಕೂಡ ಉತ್ತಮವಾಗಿ ಬ್ಯಾಟ್ ಬೀಸಿದರು. 

ನ್ಯೂಜಿಲೆಂಡ್ ನಿಗದಿತ  50 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಳೆದುಕೊಂಡು, 333 ರನ್ ಪೇರಿಸಿತು. ಭಾರತದ ಪರ ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್ ಹಾಗೂ ಅಕೀಬ್ ನಬಿ ತಲಾ 2 ವಿಕೆಟ್ ಕಬಳಿಸಿದರು. 

334 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ, ಮೊದಲ ಓವರ್‌ನಲ್ಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ವಿಕೆಟ್‌ಗಳನ್ನು ಶೂನ್ಯಕ್ಕೆ ಕಳೆದುಕೊಂಡಿತು. ಇಶಾನ್ ಕಿಶನ್ 27 ರನ್, ಅಕ್ಷರ್ ಪಟೇಲ್ 21 ರನ್ ಹಾಗೂ ನಮನ್ ಧೀರ್ 21 ರನ್ ಬಾರಿಸಲಷ್ಟೇ ಶಕ್ತರಾದರು. 

ಈ ಮೂಲಕ ಟೀಮ್ ಇಂಡಿಯಾ 26.4 ಓವರ್‌ಗಳಿಗೆ ಕೇವಲ 89 ರನ್ ಗಳಿಸಿ, ಆಲ್ ಔಟ್ ಆಯಿತು. ಇದರೊಂದಿಗೆ 5 ಪಂದ್ಯಗಳ ಈ ಸರಣಿಯಲ್ಲಿ ಭಾರತದ ಮುನ್ನಡೆ 2-1ಕ್ಕೆ ತಲುಪಿದ್ದು, ಮಳೆಯಿಂದಾಗಿ 1 ಪಂದ್ಯ ರದ್ದಾಗಿತ್ತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.