IND vs NL: ಭಾರತಕ್ಕೆ ಭರ್ಜರಿ ಜಯ
IND vs NL: ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ, ಭಾರತವು ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್ಗಳಿಂದ ಜಯಿಸಿದೆ.
IND vs NL: ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆದ ಮೊದಲ ಏಕದಿನ (ODI) ಪಂದ್ಯದಲ್ಲಿ, ಭಾರತವು ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್ಗಳಿಂದ ಜಯಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡವು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ತೀರ್ಮಾನಿಸಿತು. ನ್ಯೂಜಿಲ್ಯಾಂಡ್ 40.2 ಓವರ್ಗಳಲ್ಲಿ 185/10 ರನ್ ಗಳಿಸಲಷ್ಟೇ ಶಕ್ತವಾಯಿತು. ಟಿಮ್ ಸೀಫರ್ಟ್ 38 ರನ್ ಹಾಗೂ ಗ್ಲೆನ್ ಫಿಲಿಪ್ಸ್ 30 ರನ್ ಗಳಿಸಿದರು.
ಭಾರತದ ಪರ ಅರ್ಷ್ದೀಪ್ ಸಿಂಗ್ 4 ವಿಕೆಟ್, ಗುರ್ನೂರ್ ಬ್ರಾರ್ 3 ವಿಕೆಟ್ ಮತ್ತು ಅಂಶುಲ್ ಕಾಂಬೋಜ್ 2 ಮೇಡನ್ ಓವರ್ ಮಾಡಿ, ಕೇವಲ 22 ರನ್ ಬಿಟ್ಟುಕೊಟ್ಟು 2 ವಿಕೆಟ್ ಕಬಳಿಸಿದರು.
ಮಳೆಯ ಕಾರಣದಿಂದಾಗಿ, ಡಕ್ವರ್ತ್-ಲೂಯಿಸ್ ನಿಯಮದನ್ವಯ ಭಾರತಕ್ಕೆ 32 ಓವರ್ಗಳಲ್ಲಿ 143 ರನ್ಗಳ ಗುರಿ ನೀಡಲಾಗಿತ್ತು. ಬರೀ 22.4 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 143 ರನ್ ಬಾರಿಸಿ, ಗೆಲವು ಸಾಧಿಸಿತು.
ಟೀಂ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿ 74 ರನ್ (51 ಎಸೆತ), ಶುಭ್ಮನ್ ಗಿಲ್ 37 ರನ್ (56 ಎಸೆತ) ಹಾಗೂ ಶ್ರೇಯಸ್ ಅಯ್ಯರ್ 15 ರನ್ (13 ಎಸೆತ) ರನ್ ಸಿಡಿಸಿದರು.
ಪಂದ್ಯದ ಶ್ರೇಷ್ಠ ಆಟಗಾರ: ಯುವ ಬೌಲರ್ ಅಂಶುಲ್ ಕಾಂಬೋಜ್ 'ಪ್ಲೇಯರ್ ಆಫ್ ದಿ ಮ್ಯಾಚ್' ಪ್ರಶಸ್ತಿಗೆ ಭಾಜನರಾದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.