Irumudi: ಸೆ.18ಕ್ಕೆ 'ಇರುಮುಡಿ' OTTಯಲ್ಲಿ ಬಿಡುಗಡೆ

Irumudi: 'ಮಾಸ್ ಮಹಾರಾಜ' ರವಿತೇಜ ನಟನೆಯ 'ಇರುಮುಡಿ' ಸಿನಿಮಾ, ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಸೆ.18ಕ್ಕೆ 'ನೆಟ್‌ಫ್ಲಿಕ್ಸ್'ನಲ್ಲಿ ಸ್ಟ್ರೀಮಿಂಗ್ ಆಗಲಿದೆ.

Sep 15, 2026 - 12:45
Irumudi: ಸೆ.18ಕ್ಕೆ 'ಇರುಮುಡಿ' OTTಯಲ್ಲಿ ಬಿಡುಗಡೆ

Irumudi: 'ಮಾಸ್ ಮಹಾರಾಜ' ರವಿತೇಜ ನಟನೆಯ ತೆಲುಗಿನ ಸೂಪರ್-ಹಿಟ್ ಸಿನಿಮಾ 'ಇರುಮುಡಿ' ಸಿನಿಮಾ, ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಸೆ.18ಕ್ಕೆ 'ನೆಟ್‌ಫ್ಲಿಕ್ಸ್'ನಲ್ಲಿ ಸ್ಟ್ರೀಮಿಂಗ್ ಆಗಲಿದೆ. 

ಆ.21 ರಂದು ತೆಲುಗು & ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ್ದು, ಈವರೆಗೆ ವಿಶ್ವಾದ್ಯಂತ ರೂ.234.95 ಗ್ರಾಸ್ ಕಲೆಕ್ಷನ್ ಮಾಡಿದೆ.  

ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿದ್ದು, ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದಾರೆ. ಇದರ ಕಥೆಯು ಅಪ್ಪ ಹಾಗೂ ಮಗಳ ನಡುವಿನ ಭಾವನಾತ್ಮಕ ಸಂಬಂಧದ ಸುತ್ತ ಸುತ್ತುತ್ತದೆ. 

ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ರವಿತೇಜ ಹಾಗೂ ಮಗಳ ಪಾತ್ರದಲ್ಲಿ ನಟಿಸಿರುವ ಬೇಬಿ ನಕ್ಷತ್ರ ಅಭಿನಯಕ್ಕೆ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಪ್ರಿಯಾ ಭವಾನಿ ಶಂಕರ್ (ನಾಯಕಿ), ಸಾಯಿ ಕುಮಾರ್, ಅಜಯ್ ಘೋಷ್ ಮತ್ತು ರಮೇಶ್ ಇಂದಿರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದು, ವಿಷ್ಣು ಶರ್ಮಾ ಕ್ಯಾಮೆರಾ ವರ್ಕ್ ಮಾಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.