Lenin: 'ಲೆನಿನ್' OTTಯಲ್ಲಿ ಸ್ಟ್ರೀಮಿಂಗ್

Lenin: ಅಖಿಲ್ ಅಕ್ಕಿನೇನಿ ನಟನೆಯ ತೆಲುಗಿನ ಬ್ಲಾಕ್ ಬ್ಲಾಸ್ಟರ್ ಸಿನಿಮಾ ಲೆನಿನ್ ಒಟಿಟಿಯಲ್ಲಿ ಬಿಡುಗಡೆಗೊಂಡಿದೆ.

Aug 11, 2026 - 16:49
Lenin: 'ಲೆನಿನ್' OTTಯಲ್ಲಿ ಸ್ಟ್ರೀಮಿಂಗ್

ಅಖಿಲ್ ಅಕ್ಕಿನೇನಿ ನಟನೆಯ ತೆಲುಗಿನ ಬ್ಲಾಕ್ ಬ್ಲಾಸ್ಟರ್ ಸಿನಿಮಾ ಲೆನಿನ್ (Lenin) ಒಟಿಟಿಯಲ್ಲಿ ಬಿಡುಗಡೆಗೊಂಡಿದೆ. ಆಗಸ್ಟ್ 7 ರಿಂದ 'ಜೀ5'ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಆಡಿಯೋ ಲಭ್ಯವಿದೆ. 

ಜುಲೈ 10 ರಂದು ರಿಲೀಸ್ ಆಗಿದ್ದ ಈ ಚಿತ್ರ ರೂ.65.52 ಕೋಟಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿದೆ. ನಿರ್ದೇಶಕ ಮುರಳಿ ಕಿಶೋರ್ ಅಬ್ಬುರು ಆಕ್ಷನ್ ಕಟ್ ಹೇಳಿದ್ದು, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ ನಟಿಸಿದ್ದಾರೆ. 

1980ರ ದಶಕದಲ್ಲಿ ಆಂಧ್ರ ಪ್ರದೇಶದ ರಾಯಲಸೀಮಾಗೆ ಸೇರಿರುವ ಹಳ್ಳಿಯಲ್ಲಿ ನಡೆಯುವ ಆಕ್ಷನ್ & ಪ್ರೇಮಕಥೆಯನ್ನು ಒಳಗೊಂಡಿದೆ. 

ಇದೇ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಕನ್ನಡದ ನಟ ಪ್ರಮೋದ್ (ವಸಂತ್ ಪಾತ್ರ) ಅಭಿನಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಿವಾಜಿ, ಸುನೀಲ್, ಬ್ರಹ್ಮಾಜಿ, ಈಶ್ವರಿ ರಾವ್ ಹಾಗೂ ಗೆಟಪ್ ಶ್ರೀನು ಮುಖ್ಯಭೂಮಿಕೆಯಲ್ಲಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.