OTTಯಲ್ಲಿ 'ದಿ ಡೆವಿಲ್' ಸ್ಟ್ರೀಮಿಂಗ್ ಶುರು

The Devi: ಇಂದಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ 'ದಿ ಡೆವಿಲ್' ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

Jul 17, 2026 - 13:18
OTTಯಲ್ಲಿ 'ದಿ ಡೆವಿಲ್' ಸ್ಟ್ರೀಮಿಂಗ್ ಶುರು

ಬೆಂಗಳೂರು: ಡಿಬಾಸ್ ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ಲಭ್ಯವಾಗಿದೆ. ಇಂದಿನಿಂದ (ಜುಲೈ 17) ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ 'ದಿ ಡೆವಿಲ್' (The Devil) ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಈ ಬಗ್ಗೆ ಜೀ5 ಕನ್ನಡ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದು, 'ರಾಜಕೀಯದ ಆಟದಲ್ಲಿ ಎಲ್ಲರೂ ಆಡ್ತಾರೆ... ಆದ್ರೆ ಎಲ್ಲರನ್ನೂ ಆಡಿಸೋನು ಒಬ್ಬನೇ... ದಿ ಡೆವಿಲ್' ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ.

ಡಿಸೆಂಬರ್ 11, 2025ರಲ್ಲಿ ಈ ಚಿತ್ರವು ಬಿಡುಗಡೆಯಾಗಿತ್ತು. ದರ್ಶನ್ ದ್ವಿಪಾತ್ರದಲ್ಲಿ (ಧನುಷ್ & ಕೃಷ್ಣ) ಕಾಣಿಸಿಕೊಂಡಿದ್ದರು. ರಚನಾ ರೈ  ಜೋಡಿಯಾಗಿದ್ದರು. ನಿರ್ದೇಶಕ ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದರು.

ಮಹೇಶ್ ಮಾಂಜ್ರೇಕರ್, ವಿನಯ್ ಗೌಡ, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ ಹಾಗೂ ಹುಲಿ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.