ಇಂದಿನಿಂದ ಆ.13ರವರೆಗೆ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ವಾಹನ ಸವಾರರು, ಸಾರ್ವಜನಿಕರ ಸಹಕಾರ ಕೋರಿದ ಹೆದ್ದಾರಿ ಪ್ರಾಧಿಕಾರ

ರಾ.ಹೆ 66 ರಲ್ಲಿ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Aug 7, 2025 - 16:21
ಇಂದಿನಿಂದ ಆ.13ರವರೆಗೆ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ  ವಾಹನ ಸವಾರರು, ಸಾರ್ವಜನಿಕರ ಸಹಕಾರ ಕೋರಿದ ಹೆದ್ದಾರಿ ಪ್ರಾಧಿಕಾರ

ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. 

ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು  ವಾಹನಗಳ  ದಟ್ಟಣೆ  ಇಲ್ಲದ  ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3:00 ರವರೆಗೆ ಹಾಗೂ ರಾತ್ರಿ ವೇಳೆ ನಡೆಸಲಾಗುತ್ತದೆ. ಈ ಅವಧಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಮತ್ತು ತಾತ್ಕಾಲಿಕ ಮಾರ್ಗ ಬದಲಿಸುವ ಸಾಧ್ಯತೆ ಇದೆ. ಸಂಚಾರ ಸುಗಮ ನಿರ್ವಹಣೆಗೆ ಸಹಾಯವಾಗುವಂತೆ ಸ್ಥಳದಲ್ಲಿ ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. 

ಈ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಎದುರಾಗುವ ಸಾಧ್ಯತೆ ಇದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು.ಅಲ್ಲದೇ  ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಸೂಚನೆಗಳನ್ನು ಅನುಸರಿಸಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಎನ್ ಎಚ್ ಐ ಎ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.