ಇಂದು 'ಬಿಸಿ ರೋಡ್ ಚಲೋ'.. ಪ್ರತಿಭಟನೆ ಯಶಸ್ವಿಗೊಳಿಸಲು ಸಂಸದ ಕ್ಯಾ.ಚೌಟ ಕರೆ
BC Road Chalo: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಹೊರಟಿರುವುದನ್ನು ಖಂಡಿಸಿ, ಇಂದು 'ಬಿ.ಸಿ.ರೋಡ್ ಚಲೋ' ನಡೆಯಲಿದೆ.
ಮಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಹೊರಟಿರುವುದನ್ನು ಖಂಡಿಸಿ, ಇಂದು 'ಬಿ.ಸಿ.ರೋಡ್ ಚಲೋ' ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಹಿಂದೂ ಸಮಾಜದವರು ಭಾಗವಹಿಸಿ, ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಕೋರಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಪರ ಸಂಘಟನೆಗಳನ್ನು ದಮನಿಸುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದಿದ್ದಾರೆ.
ರಾಜಕೀಯ ಪ್ರೇರಿತವಾಗಿ ಯಾರನ್ನೋ ಮೆಚ್ಚಿಸಲು ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಮಾಜದ ಪ್ರಮುಖರನ್ನು ಟಾರ್ಗೆಟ್ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ, ಪದೇ-ಪದೇ ಹಿಂದೂ ಪರ ಹೋರಾಟಗಾರರ ಧ್ವನಿಯನ್ನು ದಮನಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವು ಈ ರೀತಿ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಕೋಕಾ ಕಾಯ್ದೆಯನ್ನು ಹಾಕುವ ಮೂಲಕ ದ್ವೇಷದ ರಾಜಕಾರಣವನ್ನು ಪುನರಾವರ್ತಿಸುತ್ತಿದೆ. ಕಾಂಗ್ರೆಸ್‌ನವರು ತುಷ್ಠೀಕರಣ ರಾಜಕಾರಣವನ್ನು ಕೊನೆಗೊಳಿಸಬೇಕಾದರೆ, ಹಿಂದೂ ಸಮಾಜವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.