ತಮಿಳುನಾಡಿಗೆ ಕಾವೇರಿ ನೀರು.. ಇಂದು ಮಹತ್ವದ ಸಭೆ

CWMA: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಇಂದು (ಜುಲೈ 30) ಪ್ರಾಧಿಕಾರವು ಸಭೆ ಸೇರಲಿದ್ದು, ಕರ್ನಾಟಕದ ಮೇಲ್ಮನವಿ ಕುರಿತು ವಿಚಾರಣೆ ನಡೆಸಲಿದೆ.

Jul 30, 2026 - 08:34
ತಮಿಳುನಾಡಿಗೆ ಕಾವೇರಿ ನೀರು.. ಇಂದು ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು. 

ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA), ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಇಂದು (ಜುಲೈ 30) ಪ್ರಾಧಿಕಾರವು ಸಭೆ ಸೇರಲಿದ್ದು, ಕರ್ನಾಟಕದ ಮೇಲ್ಮನವಿ ವಿಚಾರಣೆಗೆ ಬರಲಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ದೇಶನದಂತೆ, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿ, ಬುಧವಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ರೈತರು ಬೀದಿಗಿಳಿದಿದ್ದರು.

ಈ ಬಗ್ಗೆ ನಿನ್ನೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿರುದ್ಧ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು.

ಇನ್ನು, ಪ್ರಾಧಿಕಾರವು ತಮಿಳುನಾಡಿಗೆ ತನ್ನ ಪಾಲಿನ ನೀರನ್ನು ಬಿಡಬೇಕು ಎಂದು ಆದೇಶಿಸಿದರೆ, ಕಾವೇರಿ ಜಲಾನಯನ ವ್ಯಾಪ್ತಿಯ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರಾಜಧಾನಿ ಬೆಂಗಳೂರು ಮಂದಿಗೂ ನೀರಿನ ಸಮಸ್ಯೆ ಎದುರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.