Today Gold Price: ಚಿನ್ನ-ಬೆಳ್ಳಿ ಬೆಲೆ ಭಾರೀ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ದರವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಬೆಂಗಳೂರು: ನಾಳೆ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತದೆ. ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಯು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದೆ.
ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.4,300 ಏರಿಕೆಯಾಗಿ ರೂ.1,59,270 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.3,950 ಹೆಚ್ಚಳವಾಗಿ ರೂ.1,46,000ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,230 ಏರಿಕೆಯಾಗಿ ರೂ.1,19,490 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ಬೆಲೆಯು ರೂ.10,000 ಹೆಚ್ಚಳವಾಗಿ ರೂ.2,55,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ಸಕಾರತ್ಮಕ ವಹಿವಾಟು
ಬೆಳಗ್ಗೆ 10:35ರ ಸುಮಾರಿಗೆ ಸೆನ್ಸೆಕ್ಸ್ 538.84 ಅಂಕಗಳು ಅಥವಾ ಶೇಕಡ 0.70% ಏರಿಕೆಯಾಗಿ 77,448.52 ಅಂಕಗಳಿಗೆ ತಲುಪಿದೆ. ನಿಫ್ಟಿ 130.80 ಅಂಕಗಳು ಅಥವಾ ಶೇಕಡ 0.54% ಹೆಚ್ಚಳವಾಗಿ 24,209.10 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಇನ್ಫೋಸಿಸ್, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ ಮತ್ತು ಟಿಸಿಎಸ್ ಷೇರುಗಳು ಲಾಭದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.