Today Gold Price: ಇಂದು ಚಿನ್ನದ ಬೆಲೆ ಅತ್ಯಲ್ಪ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Aug 25, 2026 - 11:06
Today Gold Price: ಇಂದು ಚಿನ್ನದ ಬೆಲೆ ಅತ್ಯಲ್ಪ ಇಳಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಶುಭ ಕಾರ್ಯಗಳ ಸಂಭ್ರಮ ಜೋರಾಗಿರುತ್ತದೆ. ಆಭರಣಗಳನ್ನು ಖರೀದಿಸುವವರ ಸಂಖ್ಯೆಯೂ ಹೆಚ್ಚಿರುತ್ತದೆ.  

ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಅತ್ಯಲ್ಪ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.220 ಕಡಿಮೆಯಾಗಿ ರೂ.1,63,750 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.200 ಇಳಿಕೆಯಾಗಿ ರೂ.1,50,100ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.120 ಕಡಿಮೆಯಾಗಿ ರೂ.1,22,810 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿಯೂ ರೂ.2,60,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ.

ಷೇರುಪೇಟೆ: ನಕಾರಾತ್ಮಕ ವಹಿವಾಟು:

ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಇಂದು ನಕಾರಾತ್ಮಕವಾಗಿದೆ. ಸೆನ್ಸೆಕ್ಸ್ 168.49 ಅಂಕಗಳು ಅಥವಾ ಶೇಕಡ 0.22% ಇಳಿಕೆಯಾಗಿ 77,200.62 ಅಂಕಗಳಿಗೆ ತಲುಪಿದೆ. ನಿಫ್ಟಿ 75.90 ಅಂಕಗಳು ಅಥವಾ ಶೇಕಡ 0.31% ಕುಸಿತವಾಗಿ 24,143.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಟಿಸಿಎಸ್, ಟಾಟಾ ಸ್ಟೀಲ್, ಎಟರ್ನಲ್, ಅದಾನಿ ಪೋರ್ಟ್ಸ್ ಹಾಗೂ ಟೈಟಾನ್ ಷೇರುಗಳು ಲಾಭದಲ್ಲಿವೆ. ಬಜಾಜ್ ಫೈನಾನ್ಸ್, ಹಿಂದೂಸ್ತಾನ್ ಯೂನಿಲಿವರ್, ಪವರ್ ಗ್ರಿಡ್, ಎಸ್‌ಬಿಐಎನ್ ಮತ್ತು ಸನ್ ಫಾರ್ಮಾ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.