Today Gold Price: ಇಂದು ಚಿನ್ನದ ಬೆಲೆ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ಬೆಲೆ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ಬೆಂಗಳೂರು: ಶ್ರಾವಣ ಮಾಸದಲ್ಲಿ ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ಬೆಲೆ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.
ರಾಜ್ಯದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,470 ಕಡಿಮೆಯಾಗಿ ರೂ.1,56,770 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,350 ಇಳಿಕೆಯಾಗಿ ರೂ.1,43,700ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.830 ಕಡಿಮೆಯಾಗಿ ರೂ.1,17,850 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿಯೂ ರೂ.2,55,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ನಕಾರಾತ್ಮಕ ವಹಿವಾಟು:
ಬೆಳ್ಳಗೆ 9:43 ಗಂಟೆಗೆ ಸೆನ್ಸೆಕ್ಸ್ 359.47 ಅಂಕಗಳು ಅಥವಾ ಶೇಕಡ 0.47% ಇಳಿಕೆಯಾಗಿ 76,905.04 ಅಂಕಗಳಿಗೆ ತಲುಪಿದೆ. ನಿಫ್ಟಿ 144.30 ಅಂಕಗಳು ಅಥವಾ ಶೇಕಡ 0.60% ಕಡಿಮೆಯಾಗಿ 24,031.35 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಒಎನ್‌ಜಿಸಿ, ಎಟರ್ನಲ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಬಜಾಜ್ ಆಟೋ ಕಂಪನಿ ಷೇರುಗಳು ಲಾಭದಲ್ಲಿವೆ. ಹಿಂಡಾಲ್ಕೊ, ಇಂಟರ್‌ಗ್ಲೋಬ್ ಏವಿಯೇಷನ್, ಬಜಾಜ್ ಫೈನಾನ್ಸ್, ಶ್ರೀರಾಮ್ ಫೈನಾನ್ಸ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.