Today Gold Price: ಚಿನ್ನದ ದರ ಅತ್ಯಲ್ಪ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ಬೆಂಗಳೂರು: ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಹೀಗಾಗಿ ಆಭರಣದ ಬೆಲೆಯು ಇಳಿಕೆಯಾಗುವುದು ವಾಡಿಕೆ. ಆದಾಗ್ಯೂ ಕೆಲವು ದಿನಗಳಿಂದ ಬಂಗಾರದ ಬೆಲೆಯೂ ಸತತವಾಗಿ ಏರಿಕೆಯಾಗುತ್ತಲೇ ಇದೆ.
ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ರಾಜ್ಯದಲ್ಲಿ 24 ಕ್ಯಾ. 10 ಗ್ರಾಂ ಚಿನ್ನದ ದರ ರೂ.160 ಹೆಚ್ಚಳವಾಗಿ ರೂ.1,49,890 ಆಗಿದೆ. 22 ಕ್ಯಾ. 10 ಗ್ರಾಂ ಚಿನ್ನದ ಬೆಲೆ ರೂ.150 ಏರಿಕೆಯಾಗಿ ರೂ.1,37,400ಕ್ಕೆ ಬಂದಿದೆ. 18 ಕ್ಯಾ. 10 ಗ್ರಾಂ ಚಿನ್ನದ ದರ ರೂ.120 ಹೆಚ್ಚಳವಾಗಿ ರೂ.1,12,420 ಆಗಿದೆ. 1 ಕೆಜಿ ಬೆಳ್ಳಿ ರೂ.2,40,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ಷೇರುಪೇಟೆ: ಆರಂಭಿಕ ವಹಿವಾಟು ಕುಸಿತ:
ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದೆ. ಸೆನ್ಸೆಕ್ಸ್ 222.17 ಅಂಕಗಳು ಇಳಿಕೆಯಾಗಿ 78,732.59 ಅಂಕಗಳಿಗೆ ತಲುಪಿದೆ. ನಿಫ್ಟಿ 10.65 ಅಂಕಗಳು ಕುಸಿತವಾಗಿ 24,625.35 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಟಿಸಿಎಸ್, ಟೆಕ್ ಮಹೀಂದ್ರಾ, ಹೆಚ್‌ಸಿಎಲ್ ಟೆಕ್, ಇನ್ಫೋಸಿಸ್ ಹಾಗೂ ಎನ್‌ಟಿಪಿಸಿ ಷೇರುಗಳು ಲಾಭದಲ್ಲಿವೆ. ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್, ಟ್ರೆಂಟ್, ಐಸಿಐಸಿಐ ಬ್ಯಾಂಕ್ ಮತ್ತು ಎಟರ್ನಲ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.