Today Gold Price: ಚಿನ್ನದ ಬೆಲೆ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ಬೆಂಗಳೂರು: ಬಂಗಾರದ ಬೆಲೆಯು ಸತತವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,090 ಹೆಚ್ಚಳವಾಗಿ ರೂ.1,52,350 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,000 ಏರಿಕೆಯಾಗಿ ರೂ.1,39,650ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.820 ಹೆಚ್ಚಳವಾಗಿ ರೂ.1,14,260 ಆಗಿದೆ. 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಮಾರಾಟವಾಗುತ್ತಿದೆ.
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,140 ಏರಿಕೆಯಾಗಿ ರೂ.1,52,550 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,050 ಹೆಚ್ಚಳವಾಗಿ ರೂ.1,39,850ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.870 ಹೆಚ್ಚಳವಾಗಿ ರೂ.1,14,260 ಆಗಿದೆ. 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,090 ಹೆಚ್ಚಳವಾಗಿ ರೂ.1,52,350 ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,000 ಏರಿಕೆಯಾಗಿ ರೂ.1,39,650ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.820 ಹೆಚ್ಚಳವಾಗಿ ರೂ.1,14,260 ಆಗಿದೆ. 1 ಕೆಜಿ ಬೆಳ್ಳಿ ರೂ.2,45,000 ಬೆಲೆಯಲ್ಲಿ ಮಾರಲಾಗುತ್ತಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.