Today Gold Price: ಇಂದು ಚಿನ್ನ-ಬೆಳ್ಳಿ ಬೆಲೆ ದೊಡ್ಡ ಮಟ್ಟದಲ್ಲಿ ಇಳಿಕೆ.. ಎಷ್ಟು?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿವೆ.

Nov 20, 2026 - 11:14
Nov 20, 2026 - 11:14
Today Gold Price: ಇಂದು ಚಿನ್ನ-ಬೆಳ್ಳಿ ಬೆಲೆ ದೊಡ್ಡ ಮಟ್ಟದಲ್ಲಿ ಇಳಿಕೆ.. ಎಷ್ಟು?

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿವೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.5,120 ಕಡಿಮೆಯಾಗಿ ರೂ.1,25,470 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.4,700 ಇಳಿಕೆಯಾಗಿ ರೂ.1,15,100ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,840 ಕಡಿಮೆಯಾಗಿ ರೂ.94,180 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.1,75,000 ಹಾಗೂ 10 ಗ್ರಾಂ ಪ್ಲಾಟಿನಂ ರೂ.1,950 ಕಡಿಮೆಯಾಗಿ ರೂ.39,110 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.  

ಚಿನ್ನದ ಬೆಲೆ ಇಳಿಕೆಗೆ ಕಾರಣವೇನು: 

ಹಣದುಬ್ಬರ ನಿಯಂತ್ರಿಸಲು ಅಮೆರಿಕದ ಕೇಂದ್ರೀಯ ಬ್ಯಾಂಕ್ ಬಡ್ಡಿ-ದರಗಳನ್ನು ಹೆಚ್ಚಿಸುವ ನಿರೀಕ್ಷೆಯಿದ್ದು, ಸರ್ಕಾರಿ ಬಾಂಡ್‌ಗಳ ಮೇಲಿನ ಆದಾಯವು ಹೆಚ್ಚಾಗಲಿದೆ. ಚಿನ್ನದ ಮೇಲೆ ಯಾವುದೇ ಬಡ್ಡಿ ಸಿಗದಿರುವ ಕಾರಣ, ಹೂಡಿಕೆದಾರರು ಈ ಬಾಂಡ್‌ಗಳತ್ತ ಆಸಕ್ತಿ ತೋರುತ್ತಿದ್ದಾರೆ.  

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಬಲಗೊಂಡಿದ್ದು, ಇತರೆ ಕರೆನ್ಸಿಗಳಲ್ಲಿ ಚಿನ್ನ ಖರೀದಿ ದುಬಾರಿಯಾಗಿದೆ. ಇದರಿಂದಾಗಿ ಜಾಗತಿಕವಾಗಿ ಬೇಡಿಕೆಯೂ ಕುಸಿದಿದ್ದು, ಬೆಲೆ ಇಳಿಕೆಯಾಗುತ್ತಿದೆ.

ಅಮೆರಿಕ ಹಾಗೂ ಇರಾನ್ ನಡುವಿನ ಶಾಂತಿ ಮಾತುಕತೆ ಬೆಳವಣಿಗೆ ಹಾಗೂ ಕಚ್ಚಾ ತೈಲ ಬೆಲೆ ಇಳಿಕೆಯಿಂದಾಗಿ, ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲಿನ ಆಕರ್ಷಣೆ ಕಡಿಮೆಯಾಗಿದೆ. ಅಲ್ಲದೆ, ದೇಶೀಯ ಗ್ರಾಹಕರಲ್ಲೂ ಚಿನ್ನ ಖರೀದಿ ಉತ್ಸಾಹ ಕಡಿಮೆಯಾಗಿದ್ದು, ಬೆಲೆ ಇಳಿಕೆಯಾಗಲು ಕಾರಣವೆಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.