Today Gold Price: ಇಂದು ಆಭರಣದ ಬೆಲೆ ಭಾರೀ ಇಳಿಕೆ.. ಬೆಳ್ಳಿ ರೂ.10,000 ಕುಸಿತ!

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿವೆ.

Nov 25, 2026 - 11:53
Nov 25, 2026 - 11:54
Today Gold Price: ಇಂದು ಆಭರಣದ ಬೆಲೆ ಭಾರೀ ಇಳಿಕೆ.. ಬೆಳ್ಳಿ ರೂ.10,000 ಕುಸಿತ!

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭಿಸಿದೆ. ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.3,220 ಕಡಿಮೆಯಾಗಿ ರೂ.1,24,580 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,950 ಇಳಿಕೆಯಾಗಿ ರೂ.1,14,200ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,410 ಕಡಿಮೆಯಾಗಿ ರೂ.93,440 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.10,000 ಇಳಿಕೆಯಾಗಿ ರೂ.1,65,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ಷೇರುಪೇಟೆ:  ಸಕಾರತ್ಮಕ ವಾಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 1000.90 ಅಂಕಗಳು ಏರಿಕೆಯಾಗಿ 83,436.89 ಅಂಕಗಳಿಗೆ ಬಂದಿದೆ. ನಿಫ್ಟಿ 308.70 ಅಂಕಗಳು ಹೆಚ್ಚಳವಾಗಿ 25,658.35 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಇನ್ಫೋಸಿಸ್, ಇಂಡಿಗೋ, ಟಿಸಿಎಸ್, ಬಜಾಜ್ ಫೈನಾನ್ಸ್ ಮತ್ತು ಐಸಿಐಸಿಐ ಬ್ಯಾಂಕ್‌ಗಳು ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಪವರ್ ಗ್ರಿಡ್, ಎಂ&ಎಂ, ಎನ್‌ಟಿಪಿಸಿ, ಟಾಟಾ ಸ್ಟೀಲ್ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.